ಬೆಂಗಳೂರು: ಪಕ್ಷದ ಕೆಲಸ ಮಾಡದ ಪದಾಧಿಕಾರಿಗಳಿಗೆ ಪಕ್ಷದಲ್ಲಿ ಸ್ಥಾನ ಇಲ್ಲ ಅಂತ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ (H. D Kumaraswamy) ಎಚ್ಚರಿಕೆ ನೀಡಿದ್ದಾರೆ. ಜೆಪಿ ಭವನದಲ್ಲಿ ನಡೆದ ಜೆಡಿಎಸ್ (JDS) ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಮುಖಂಡರಿಗೆ ಹೆಚ್‍ಡಿಕೆ ಖಡಕ್ ಎಚ್ಚರಿಕೆ ಕೊಟ್ಟರು.
Advertisement
ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ. ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ (Election) ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಸಲಹೆ ಕೊಟ್ಟರು. ಇದನ್ನೂ ಓದಿ: ತಾಲೂಕು, ಗ್ರಾಮ ಮಟ್ಟದಲ್ಲೂ `PayCM’ ಅಭಿಯಾನ- ಕಾಂಗ್ರೆಸ್ ನಿಂದ ಮಾಸ್ಟರ್ ಪ್ಲ್ಯಾನ್
Advertisement
ಜೆ.ಪಿ.ಭವನದಲ್ಲಿ @JanataDal_S ಪಕ್ಷದ ರಾಜ್ಯ ಘಟಕದ ಸದಸ್ಯರು, ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದೆ.
ರಾಜ್ಯ ಅಧ್ಯಕ್ಷರಾದ ಶ್ರೀ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಶ್ರೀ @CS_Puttaraju_ , ಯುವ ಜನತಾದಳ ರಾಜ್ಯಾಧ್ಯಕ್ಷ ಶ್ರೀ @Nikhil_Kumar_k ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.1/2 pic.twitter.com/RsqRpX5quY
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2022
Advertisement
ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ (Uttara Karnataka) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಅಂತ ತಿಳಿಸಿದರು. ಇದನ್ನೂ ಓದಿ: ಮೈಸೂರು ಸಿಲ್ಕ್ ಸೀರೆ ಧರಿಸಿ ದಸರಾಗೆ ಚಾಲನೆ ನೀಡಿದ ದ್ರೌಪದಿ ಮುರ್ಮು
Advertisement
ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದು ಕುಮಾರಸ್ವಾಮಿ ಪದಾಧಿಕಾರಿಗಳಿಗೆ ಸಲಹೆ ನೀಡಿದರು.