ಶಾಮ್ಲಿ: ವಿದ್ಯುತ್ ಸಂಪರ್ಕವನ್ನೇ ನೀಡದೇ 12 ಗ್ರಾಮಗಳಲ್ಲಿರುವ ಮನೆಗಳಿಗೆ 30,000 – 60,000 ರೂಪಾಯಿ ಬಿಲ್ ನೀಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶಾಮ್ಲಿ (Shamli) ಜಿಲ್ಲೆಯಲ್ಲಿ ನಡೆದಿದೆ. ಬಿಲ್ ಕಂಡು ಗ್ರಾಮಸ್ಥರು ಆಘಾತಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಶಾಮ್ಲಿ ಜಿಲ್ಲೆಯ ಖೋಕ್ಸಾ, ಅಲಾವುದ್ದೀನ್‍ಪುರ, ದುದ್ಲಿ, ಡೇರಾ ಭಾಗೀರಥ್, ನಯಾ ಗಾಂವ್ ಸೇರಿ ಹಲವು ಗ್ರಾಮಗಳಲ್ಲಿ ಈ ಘಟನೆ ನಡೆದಿದ್ದು, ಈ ಗ್ರಾಮಗಳಲ್ಲಿ ಬವಾರಿಯಾ ಬುಡಕಟ್ಟು ಜನಾಂಗದವರು ವಾಸವಾಗಿದ್ದಾರೆ. ಪ್ರತಿ ಗ್ರಾಮದಲ್ಲಿ 250- 300 ಮಂದಿ ವಾಸವಾಗಿದ್ದಾರೆ. ಇದನ್ನೂ ಓದಿ: 36 ಸೇತುವೆಗಳು ಸಂಚಾರಕ್ಕೆ ಅನರ್ಹ – ದುರಂತ ಸಂಭವಿಸೋದಕ್ಕೂ ಮುನ್ನವೇ ಎಚ್ಚೆತ್ತ ಸರ್ಕಾರ
Advertisement
Advertisement
ಕಳೆದ ಕೆಲವು ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಮೀಟರ್‌ಗಳನ್ನು ಉಚಿತವಾಗಿ ನೀಡುವುದಾಗಿ ವಿದ್ಯುತ್ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದರು. ಬಳಿಕ ಮನೆಗಳಿಗೆ ವಿದ್ಯುತ್ ಮೀಟರ್‌ಗಳನ್ನು ಅಳವಡಿಸಿದ್ದರು. ನಂತರ ವಿದ್ಯುತ್ ಸಂಪರ್ಕವನ್ನೇ ನೀಡದೇ ಈಗ ಬಿಲ್‍ಗಳನ್ನು ನೀಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ವೈರಲ್ ವೀಡಿಯೋದಲ್ಲಿರೋದು ಫಿಸಿಯೋಥೆರಪಿಸ್ಟ್ ಅಲ್ಲ, ರೇಪಿಸ್ಟ್: ಬಿಜೆಪಿ
Advertisement
Advertisement
ನಾವು ವಿದ್ಯುತ್ ಇಲ್ಲದೇ ಜೀವನ ನಡೆಸಿದ್ದೇವೆ, ನಾವು ಯಾಕೆ ಬಿಲ್ ಪಾವತಿಸಬೇಕು ಎಂದು ಸ್ಥಳೀಯ ಆಡಳಿತವನ್ನು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮಾಂಚಲ್ ವಿದ್ಯುತ್ ವಿತ್ರನ್ ನಿಗಮ್ ಲಿಮಿಟೆಡ್‍ನ ಸೂಪರಿಂಟೆಂಡಿಂಗ್ ಎಂಜಿನಿಯರ್ ರಾಮ್ ಕುಮಾರ್ ಜನರು ಬಿಲ್ ಪಡೆದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.