ಕೇಪ್‌ಟೌನ್: ದಕ್ಷಿಣ ಆಫ್ರಿಕಾದಲ್ಲಿ ಭೀಕರ ಪ್ರವಾಹದಿಂದಾಗಿ ನೀರು, ವಿದ್ಯುತ್ ಇಲ್ಲದೇ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದ ಪರಿಣಾಮವಾಗಿ ಇದುವರೆಗೆ 341 ಮಂದಿ ಸಾವಿಗೀಡಾಗಿದ್ದಾರೆ.
ವಿಲಕ್ಷಣ ಮಳೆಯಿಂದಾಗಿ ರಸ್ತೆಗಳು ಮತ್ತು ಸೇತುವೆಗಳು ಕೊಚ್ಚಿ ಹೋಗಿವೆ. ನಿವಾಸಿಗಳು ಸೋಮವಾರದಿಂದ ವಿದ್ಯುತ್, ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಕೊಚ್ಚಿ ಹೋಯ್ತು ಆಫ್ರಿಕಾದಲ್ಲಿದ್ದ 70 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ
Advertisement
Advertisement
ಜನಜೀವನ, ಮೂಲಸೌಕರ್ಯ ಮತ್ತು ಸೇವಾ ವಿತರಣಾ ಜಾಲವು ಅಪಾರ ಪ್ರಮಾಣದಲ್ಲಿ ನಾಶವಾಗಿದೆ ಎಂದು ಕ್ವಾಝುಲು-ನಟಾಲ್ ಪ್ರಾಂತ್ಯದ ಪ್ರೆಮಿರ್ ಸಿಹ್ಲೆ ಜಿಕಲಾಲಾ ತಿಳಿಸಿದ್ದಾರೆ.
Advertisement
ಪ್ರವಾಹದಿಂದಾಗಿ 40,723 ಮಂದಿ ತೊಂದರೆಗೆ ಸಿಲುಕಿದ್ದಾರೆ. 341 ಮಂದಿ ಮೃತಪಟ್ಟಿದ್ದಾರೆ. ಪ್ರವಾಹ ಸಂತ್ರಸ್ತರ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಿಳಾ ರೋಗಿಗಳಿಗೆ ಕಿಸ್, ಹಗ್ ಮಾಡಿ ಲೈಂಗಿಕ ಅಪರಾಧ- ಭಾರತ ಮೂಲದ ವೃದ್ಧ ವೈದ್ಯನಿಗೆ ಶಿಕ್ಷೆ
Advertisement
ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ಪ್ರವಾಹ ಪರಿಣಾಮವಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿಸಿದ್ದಾರೆ.