ಮುಂಬೈ: ಸೊಹ್ರಾಬುದ್ದೀನ್ ಶೇಖ್ ಎನ್‍ಕೌಂಟರ್ ಪ್ರಕರಣದ ಎಲ್ಲ ಆರೋಪಿಗಳನ್ನು ಮುಂಬೈಯ ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿದೆ.
ಪಿತೂರಿ ನಡೆಸಿ ಸೊಹ್ರಾಬುದ್ದೀನ್ ಮತ್ತು ತುಳಸಿ ರಾಮ್ ಪ್ರಜಾಪತಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಸರಿಯಾಗಿ ಪ್ರಬಲ ಸಾಕ್ಷ್ಯಗಳು ದೊರೆಯದ ಕಾರಣ ಆರೋಪಿಗಳನ್ನು ಖುಲಾಸೆ ಮಾಡುತ್ತಿರುವುದಾಗಿ ಕೋರ್ಟ್ ತಿಳಿಸಿದೆ.
Advertisement
ಏನಿದು ಪ್ರಕರಣ?
ಸೊಹ್ರಾಬುದ್ದೀನ್ ಹಾಗೂ ಸಹಚರ ತುಳಸೀರಾಮ್ ಪ್ರಜಾಪತಿಯನ್ನು ಎನ್‍ಕೌಂಟರ್ ಮಾಡಿ ಹತ್ಯೆ ಮಾಡಲಾಗಿತ್ತು. ಸೊಹ್ರಾಬುದ್ದೀನ್ ಗೆ ಎಲ್‍ಇಟಿ ಮತ್ತು ಪಾಕಿಸ್ತಾನದ ಐಎಸ್‍ಐ ಜೊತೆ ಸಂಪರ್ಕವಿತ್ತು. ಹೀಗಾಗಿ ನಾವು ಹತ್ಯೆ ಮಾಡಿದ್ದೇವೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದರು ಈ ಪ್ರಕರಣ 22 ಆರೋಪಿಗಳ ಪೈಕಿ ಬಹುತೇಕ ಎಲ್ಲರೂ ಗುಜರಾತ್, ರಾಜಸ್ಥಾನ ಹಾಗೂ ಕೆಲ ಆಂಧ್ರ ಪ್ರದೇಶದ ಪೊಲೀಸ್ ಅಧಿಕಾರಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೈವಾಡವಿದೆ ಎಂದೂ ಕೂಡ ಆರೋಪ ಮಾಡಲಾಗಿತ್ತು. ಈ ಕಾರಣಕ್ಕಾಗಿ ಹಲವು ವರ್ಷಗಳಿಂದ ಈ ಸುದ್ದಿ ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv