ನವದೆಹಲಿ: ಹೊಸದಾಗಿ 1 ಸಾವಿರ ರೂ. ನೋಟುಗಳನ್ನು ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಗರ್ಗ್ ತಿಳಿಸಿದ್ದಾರೆ.
500, 1 ಸಾವಿರ ರೂ. ನೋಟುಗಳು ಬ್ಯಾನ್ ಆದ ಬಳಿಕ ಹೊಸದಾಗಿ 2 ಸಾವಿರ, 500 ರೂ., 200 ರೂ., 50 ರೂ.ಗಳನ್ನು ಬಿಡುಗಡೆ ಮಾಡಿರುವ ಆರ್‍ಬಿಐ 1 ಸಾವಿರ ರೂ. ನೋಟು ಚಲಾವಣೆಗೆ ತರಲು ಮುಂದಾಗುತ್ತಿದೆ ಎನ್ನುವ ಸುದ್ದಿ ಸೋಮವಾರ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
Advertisement
ಈ ಸುದ್ದಿಗಳಿಗೆ ಸುಭಾಶ್ ಗರ್ಗ್, 1 ಸಾವಿರ ರೂ. ನೋಟುಗಳನ್ನು ಮತ್ತೆ ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಟ್ವೀಟ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
Advertisement
ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ. ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದ್ದು, ಮೈಸೂರು ಮತ್ತು ಸಾಲ್ಬೋನಿಯಲ್ಲಿ ಹೊಸ ನೋಟುಗಳು ವಿಶೇಷ ಭದ್ರತಾ ವೈಶಿಷ್ಟ್ಯಗಳೊಂದಿಗೆ ಮುದ್ರಣವಾಗಲಿದೆ ಎಂದು ವರದಿ ತಿಳಿಸಿತ್ತು.
Advertisement
ಕಪ್ಪುಹಣವನ್ನು ತಡೆಗಟ್ಟಲು ನವೆಂಬರ್ 8 ರಂದು 500 ಮತ್ತು 1 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿ ತಿಳಿಸಿದ್ದರು. ಮೈಸೂರಿನ ಮೇಟಗಳ್ಳಿ, ಮಹಾರಾಷ್ಟ್ರದ ನಾಸಿಕ್, ಮಧ್ಯಪ್ರದೇಶದ ದೇವಾಸ್, ಪಶ್ಚಿಮ ಬಂಗಾಳದ ಸಾಲ್ಬೋನಿಯಲ್ಲಿ ಆರ್‍ಬಿಐ ಮುದ್ರಣ ಘಟಕವನ್ನು ಹೊಂದಿದೆ.
Advertisement
There is no proposal to reintroduce 1000 rupee note.
— Subhash Chandra Garg (@Subhashgarg1960) August 29, 2017