ಬೆಂಗಳೂರು: ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು(Muslim College) ಪ್ರಾರಂಭ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕವಾಗಿ ಮುಸ್ಲಿಂ ಹುಡುಗಿಯರಿಗೆ 10 ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
- Advertisement
ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದಿಲ್ಲ. ಪ್ರತ್ಯೇಕ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸರ್ಕಾರದ ಮುಂದೆ ಕಡತವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಎಂಟ್ರಿ ಕೊಟ್ಟಿವೆ 4 ಚಿರತೆಗಳು? – ಕೋಡಿಪಾಳ್ಯ ಬಳಿಯ 5 ಶಾಲೆಗಳಿಗೆ ಆತಂಕ
- Advertisement
ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನ ಟೂಲ್‌ಕಿಟ್ ಸುದ್ದಿಗಳೂ ಆರಂಭವಾಗಿದೆ. ಅದರಲ್ಲೊಂದು ಈ ಮುಸ್ಲಿಂ ಕಾಲೇಜು ಸುದ್ದಿ.
ಸ್ಪಷ್ಟವಾಗುವ ಸಂಗತಿಗಳು ಎರಡು : ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್‌ಗೆ ಕೆಲಸವೂ ಇಲ್ಲ.#ಹಿಂದೂವಿರೋಧಿಕಾಂಗ್ರೆಸ್#AntiHinduCongress pic.twitter.com/VjcJCqr8Sv
— BJP Karnataka (@BJP4Karnataka) December 1, 2022
ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ವಕ್ಫ್ ಬೋರ್ಡ್ ಅಧ್ಯಕ್ಷ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ. ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ವಿವಾದಕ್ಕೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಜೊಲ್ಲೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.