ಚೆನ್ನೈ: ಹಿಂದಿ ಅಥವಾ ಯಾವುದೋ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಅವರು ಹಿಂದಿ ಹೇರಿಯನ್ನು ಖಂಡಿಸಿ, ಹಿಂದಿ ಮಾತನಾಡುವವರು ಪಾನಿಪುರಿ ಮಾರಾಟ ಮಾರುತ್ತಿದ್ದಾರೆ ಎಂದು ವಿವಾದತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಹಿಂದಿಯಲ್ಲಿ ಮಾತನಾಡುವವರು ಪಾನಿಪೂರಿ ಮಾರುತ್ತಿದ್ದಾರೆ: TN ಸಚಿವ ಪೊನ್ಮುಡಿ
ಈ ಕುರಿತಂತೆ ಪ್ರತಿಕ್ರಿಯಿಸಿದ ರಾಜ್ಯಪಾಲ ಆರ್.ಎನ್.ರವಿ ಅವರು, ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಬೇರೆ ಯಾವುದೋ ಭಾಷೆಯನ್ನು ಹೇರಲಾಗುತ್ತಿದೆ ಎಂಬ ಭಾವನೆ ಕೆಲವರಿಂದ ಸೃಷ್ಟಿಯಾಗುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ನಾನು ಭಾವಿಸುತ್ತೇನೆ. ರಾಷ್ಟ್ರೀಯ ಶೈಕ್ಷಣಿಕ ನೀತಿಯ ಸಂಪೂರ್ಣ ಉದ್ದೇಶ ಪ್ರಾದೇಶಿಕ ಭಾಷೆಗಳಲ್ಲಿ ಅಥವಾ ಮಾತೃಭಾಷೆಯಲ್ಲಿ ಕಲಿಕೆಗೆ ಒತ್ತು ನೀಡುವುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಲ್ಲೂರಮ್ಮನ ದರ್ಶನದಿಂದ ಮನಸ್ಸಿಗೆ ಖುಷಿಯಾಗಿದೆ: ನಿರ್ಮಲಾ ಸೀತಾರಾಮನ್
ಇತ್ತೀಚೆಗೆ ನಡೆದ ಸಮ್ಮೇಳನವೊಂದರಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಅವರು ಪ್ರಾದೇಶಿಕ ಭಾಷೆಗಳನ್ನು ಉಚ್ಚ ನ್ಯಾಯಾಲಯದ ಭಾಷೆಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಸಾಮಾನ್ಯವಾಗಿ ನ್ಯಾಯ ಕೇಳಲು ಹೋದವರಿಗೆ ಅರ್ಥವಾಗುವ ಭಾಷೆಯಲ್ಲಿ ನ್ಯಾಯ ಸಿಗಬೇಕು ಎಂದಿದ್ದಾರೆ.