ಕೋಲ್ಕತ್ತಾ: ಇಲ್ಲಿನ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್ (IIM) ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಸಂತ್ರಸ್ತೆಯ ತಂದೆ, ನನ್ನ ಮಗಳ ಮೇಲೆ ಅತ್ಯಾಚಾರ ನಡೆದಿಲ್ಲ. ಆಕೆ ಆಟೋ ರಿಕ್ಷಾದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆ ತಂದೆ, ನನ್ನ ಮಗಳ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ. ಶುಕ್ರವಾರ ರಾತ್ರಿ 9:34ಕ್ಕೆ ನನಗೆ ಕರೆ ಮಾಡಿ ತಮ್ಮ ಮಗಳು ಆಟೋದಿಂದ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆಕೆಯನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಯ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿತ್ತು. ಆಕೆಯನ್ನು ಪೊಲೀಸರು ರಕ್ಷಿಸಿ, ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ IIM ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್
ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ಮಗಳೇ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯಾರನ್ನೋ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಪೊಲೀಸರು ಏನಾದರೂ ಹೇಳಬೇಕೆಂದು ಹೇಳಿದ್ದರು. ಆದರೆ ಆಕೆ ಏನು ಹೇಳಿಲ್ಲ ಎಂದು ಮಗಳು ನನ್ನ ಬಳಿ ತಿಳಿಸಿದ್ದಾಳೆ. ಇದನ್ನೂ ಓದಿ: ಅವನೇ ಬೇಕು ಎಂದ ಯುವತಿ – ಕೊಲೆ ಅಪರಾಧಿ ಮದ್ವೆಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್!
ನಾನು ನನ್ನ ಮಗಳೊಂದಿಗೆ ಮಾತನಾಡಿದ್ದೇನೆ. ಯಾರೂ ಹಿಂಸಿಸಿಲ್ಲ ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿಲ್ಲ ಎಂದು ಅವಳು ಹೇಳಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ. ಬಂಧಿತ ವ್ಯಕ್ತಿಯೊಂದಿಗೆ ಅವಳಿಗೆ ಯಾವುದೇ ಸಂಬಂಧವಿಲ್ಲ. ನಾನು ಅವಳೊಂದಿಗೆ ಹೆಚ್ಚು ಸಮಯ ಮಾತನಾಡಲು ಸಾಧ್ಯವಾಗಲಿಲ್ಲ. ಅವಳು ವಿಶ್ರಾಂತಿ ಪಡೆಯುತ್ತಿದ್ದಳು, ನಂತರ ನಾನು ಅವಳೊಂದಿಗೆ ಮಾತನಾಡುತ್ತೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.