ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ

Public TV
1 Min Read
Arvind Kejriwal 1

ನವದೆಹಲಿ: ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಏ.29ಕ್ಕೆ ಮುಂದೂಡಿದೆ.

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ನೀಡಿದ್ದು ಏಪ್ರಿಲ್‌ 24 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

ದೆಹಲಿ ಮದ್ಯ ನೀತಿಯಲ್ಲಿ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಬಂಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಡಿ ಬಂಧನ‌ ಕಾನೂನು ವ್ಯಾಪ್ತಿಯಲ್ಲಿದೆ. ಪ್ರಕರಣವನ್ನು ರಾಜಕೀಯಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜ ವಜಾ ಮಾಡಿತ್ತು. ಇದನ್ನೂ ಓದಿ: ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ – ಏಕವಚನದಲ್ಲೇ ಹರಿಹಾಯ್ದ ಡಿಕೆಶಿ

Supreme Court 1

ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಹಿನ್ನಲೆ ಕೇಜ್ರಿವಾಲ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಲು ನಿರಾಕರಿಸಿತು ಮತ್ತು ಇಡಿಗೆ ನೋಟಿಸ್ ಜಾರಿ ಮಾಡಿ ಸುದೀರ್ಘ ವಿಚಾರಣೆ ನಡೆಸುವುದಾಗಿ ಹೇಳಿತು.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಶುಕ್ರವಾರ ಸಣ್ಣ ದಿನಾಂಕವನ್ನು ಕೋರುತ್ತಿದ್ದೇನೆ ಈ ಪ್ರಕರಣದಲ್ಲಿ ಆಯ್ದ ಸೋರಿಕೆಗಳಿವೆ ಎಂದು ಹೇಳಿದರು. ಇದಕ್ಕೆ ಜಸ್ಟಿಸ್ ಖನ್ನಾ ನಿಮಗೆ ಒಂದು ಸಣ್ಣ ದಿನಾಂಕವನ್ನು ನೀಡುತ್ತೇನೆ ಆದರೆ ನೀವು ಸೂಚಿಸಿದ ದಿನಾಂಕ ಸಾಧ್ಯವಿಲ್ಲ ಎಂದು ಉತ್ತರಿಸಿದರು.

ಬಳಿಕ ಕೇಜ್ರಿವಾಲ್ ಅವರನ್ನ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿ (ಇಸಿಐಆರ್) ಅಥವಾ ಚಾರ್ಜ್‌ಶೀಟ್‌ನಲ್ಲಿ ಬಂಧಿಸಿಲ್. ಬದಲಿಗೆ ಇತರೆ ಆರೋಪಿಗಳ 15 ಹೇಳಿಕೆಗಳ ಮೇಲೆ ಬಂಧಿಸಿದೆ. ಚುನಾವಣಾ ಪ್ರಚಾರದಿಂದ ತಪ್ಪಿಸಲು ಬಂಧನ ಮಾಡಲಾಗಿದೆ ಎಂದು ಸಿಂಘ್ವಿ ಹೇಳಿದರು.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏ. 23 ವರೆಗೂ ರೋಸ್ ಅವೆನ್ಯೂ ಕೋರ್ಟ್ ವಿಸ್ತರಿಸಿದೆ.

 

Share This Article