Connect with us

Belgaum

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

Published

on

Share this

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಈಗ ಉಲ್ಟಾ ಹೊಡೆದಿದ್ದಾರೆ. ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.

ಈ ಸಂಬಂಧ ಗೋಕಾಕ್ ತಾಲೂಕಿನ ಅಂಕಲಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ವಿಚಾರ ಕೈಬಿಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕಿನ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸಮಲತಾ ನಡುವಿನ ಟಾಕ್ ವಾರ್ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಯಾರು ಏನು ಮಾತನಾಡಿದ್ದಾರೆ ಎಂದು ನನಗೆ ಹೆಚ್ಚು ಮಾಹಿತಿ ಇಲ್ಲ. ಎಂಡಿ ಅವರು ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಎಂಡಿ ಹೇಳುವುದು ಫೈನಲ್. ಸುಮಲತಾ ಯಾಕೆ ಹೀಗೆ ಹೇಳಿದ್ರು ಅಂತ ನನಗೆ ಗೊತ್ತಿಲ್ಲ ಎಂದರು.

ಇನ್ನು ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ನಡೆಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬೆಂಗಳೂರು, ಮುಂಬೈಗೆ ಹೋಗಿದ್ದೆ. ಸುದ್ದಿಗೋಷ್ಠಿ ಮಾಡುವ ಸಂದರ್ಭ ಬಂದಿಲ್ಲ. ಬಾಲಚಂದ್ರ ಜಾರಕಿಹೊಳಿ ಜೊತೆಗೆ ಈ ಬಗ್ಗೆ ಮಾತನಾಡುತ್ತೇನೆ. ನಾನು ಒಂಟಿ ಆಗುವ ಪ್ರಶ್ನೆ ಇಲ್ಲ. ಇನ್ನು ಮಿತ್ರ ಮಂಡಳಿ ಸದಸ್ಯರನ್ನು ನಾನು ಭೇಟಿಯಾಗಿಲ್ಲ ಎಂದು ಹೇಳಿದರು.

Click to comment

Leave a Reply

Your email address will not be published. Required fields are marked *

Advertisement