ಬೆಂಗಳೂರು: ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆ (Education Department) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮೌಖಿಕ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.
ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಎರಡ್ಮೂರು ದಿನ ಮಳೆ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆಯ ಎಚ್ಚರಿಕೆ