ಬೆಂಗಳೂರು: ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಬಿಜೆಪಿಯನ್ನು (BJP) ಮತ್ತೆ ಅಧಿಕಾರಕ್ಕೆ ತರೋದು ನಮ್ಮ ಅಜೆಂಡಾ ಎಂದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಸ್ಪಷ್ಟಪಡಿಸಿದರು.
ಜೆಪಿ ನಡ್ಡಾ (JP Nadda) ಕಾರ್ಯಕ್ರಮಕ್ಕೆ ಯಡಿಯೂರಪ್ಪ ಕಡೆಗಣನೆ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಯಡಿಯೂರಪ್ಪ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡೋಕೆ ಹೋಗಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ
ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ. ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ. ಪಕ್ಷವನ್ನು ಅಧಿಕಾರಕ್ಕೆ ತರೋದು. ಸರ್ಕಾರ ಸ್ಥಾಪನೆ ಮಾಡೋದು. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕ್ತೀನಿ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ (Narendra Modi), ಅಮಿತ್ ಶಾ (Amit Shah), ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತೆ. ಇದೆಲ್ಲದ್ರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದರು. ಇದನ್ನೂ ಓದಿ: ಕೇರಳ ಕುಟ್ಟಿ ಫೋಟೋಗೆ ಮನಸೋತ ಶಿಕ್ಷಕ – ಮ್ಯಾಟ್ರಿಮೊನಿ ಹೆಸರಲ್ಲಿ ಲಕ್ಷ ಲಕ್ಷ ಪೀಕಿದ ಯುವತಿ
ನಡ್ಡಾ ಕಾರ್ಯಕ್ರಮಕ್ಕೆ ಕೊನೆ ಕ್ಷಣದಲ್ಲಿ ಕರೆದರು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನ ಪಕ್ಷ ಕಡೆಗಣನೆ ಮಾಡುತ್ತಿಲ್ಲ. ಇದ್ರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೀನಿ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ಅಂತ ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನು ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡ್ತೀನಿ ಎಂದರು.
ನಡ್ಡಾ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರುತ್ತಿದ್ದಾರೆ ಬರಬೇಕು ಎಂದರು ಅದಕ್ಕೆ ಹೋಗ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.