ಬೆಂಗಳೂರು: ಗೌರಿ ಲಂಕೇಶ್ ನಂಬಿರುವ ಸಿದ್ಧಾಂತದಂತೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಸಹೋದರ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.
ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುವುದಿಲ್ಲ. ಅಂತ್ಯಸಂಸ್ಕಾರದಲ್ಲಿ ಯಾವುದೇ ವಿಧಿವಿಧಾನವನ್ನು ಅನುಸರಿಸುವುದಿಲ್ಲ. ಪಾರ್ಥಿವ ಶರೀರದ ಮೇಲೆ ಹೂಗಳನ್ನು ಇರಿಸಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.
Advertisement
ಜೀವನದುದ್ದಕ್ಕೂ ಧಾರ್ಮಿಕ ಆಚರಣೆ ಮೇಲೆ ಗೌರಿ ನಂಬಿಕೆ ಇಟ್ಟಿರಲಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ಅವರ ನಂಬಿದ ತತ್ವಗಳಿಗೆ ಧಕ್ಕೆ ತರುವುದಿಲ್ಲ ಎಂದು ಹೇಳಿದರು.
Advertisement
ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಅಂತ್ಯ ಸಂಸ್ಕಾರ ಲಿಂಗಾಯತ ಸಂಪ್ರದಾಯದಂತೆ ನಡೆಯಲಿದೆ ಎನ್ನುವ ಸುದ್ದಿ ಬೆಳಗ್ಗೆ ಮಾಧ್ಯಮಗಳಿಗೆ ಸಿಕ್ಕಿತ್ತು.
Advertisement
ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಸಂಜೆ 4:30ಕ್ಕೆ ಗೌರಿ ಲಂಕೇಶ್ ಅಂತ್ಯ ಸಂಸ್ಕಾರ ನಡೆಯಲಿದ್ದು, ಆಜಾದ್ ನಗರ ಪಾಲಿಕೆ ಸದಸ್ಯೆ ಸುಜಾತ ಡಿಸಿ ರಮೇಶ್ ಮಾರ್ಗದರ್ಶನ ದಂತೆ ಗುಂಡಿ ತೆಗೆಯುವ ಕಾರ್ಯ ನಡೆದಿದೆ. ಆದರೆ ಕೊನೆ ಕ್ಷಣದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನ ಬದಲಾವಣೆಯಾಗಿದೆ.