ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವಿಭಾಗದಲ್ಲೂ ಸಾಧನೆ ಮಾಡಿದ ಗಣ್ಯರಿಗೆ ಸರ್ಕಾರ ಭಾರತದ ಶ್ರೇಷ್ಠ ಪ್ರಶಸ್ತಿ ಭಾರತ ರತ್ನವನ್ನು ನೀಡಿ ಗೌರವಿಸುತ್ತೆ. ಆದರೇ ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗಳಿಗೆ ಅಥವಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ
ವಿಪರ್ಯಾಸವೆಂದರೆ ಸಾಮಾಜಕ್ಕಾಗಿ ದುಡಿದು, ಜನರಿಗಾಗಿ ಒಳ್ಳೆಯ ಕೆಲಸವನ್ನು ಮಾಡಿರುವ ಮಹಾಋಷಿ ದಯಾನಂದ ಸರಸ್ವತಿ, ಸ್ವಾಮಿ ವಿವೇಕಾನಂದರಿಂದ ಹಿಡಿದು ಶ್ರೀ ಶಿವಕುಮಾರ ಸ್ವಾಮೀಜಿಗಳ ವರೆಗೂ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ನೀಡಿಲ್ಲ ಎಂದು ಅಸಮಾಧಾನವನ್ನು ಹೊರಹಾಕಿದರು. ಇದನ್ನೂ ಓದಿ:ಭಾರತ ರತ್ನ – ಲತಾಗಿಲ್ಲದ ನಿಯಮಾವಳಿ ಸಿದ್ದಗಂಗಾ ಶ್ರೀಗಳಿಗೆ ಮಾತ್ರ ಯಾಕೆ?
ಮುಂದಿನ ಬಾರಿಯಾದರೂ ಸಾಧು ಸನ್ಯಾಸಿಗಳು ಮಾಡಿರುವ ಸೇವೆಯನ್ನು ಗುರುತಿಸಿ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರವನ್ನು ರಾಮ್‍ದೇವ್ ಒತ್ತಾಯಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv