ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ 3 ವಾರಗಳ ಕಾಲಾವಕಾಶ ನೀಡಿದೆ.
ಸಿಎಎ ಸಂಬಂಧಿಸಿದಂತೆ ಕಳೆದ ವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದರು. ಮಂಗಳವಾರ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ಪ್ರತಿಕ್ರಿಯೆ ನೀಡಲು ಏ.8 ರ ವರೆಗೆ ಸರ್ಕಾರಕ್ಕೆ ನ್ಯಾಯಾಲಯ ಗಡುವು ನೀಡಿದೆ. ಇದನ್ನೂ ಓದಿ: JMM ತೊರೆದು ಬಿಜೆಪಿ ಸೇರಿದ ಹೇಮಂತ್ ಸೊರೇನ್ ಸೊಸೆ ಸೀತಾ ಸೊರೇನ್
Advertisement
Advertisement
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು, 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.
Advertisement
Advertisement
ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, 20 ಅರ್ಜಿಗಳಿಗೆ ಉತ್ತರ ಸಲ್ಲಿಸಲು ನಾಲ್ಕು ವಾರಗಳ ಅಗತ್ಯವಿದೆ ಎಂದು ಪೀಠಕ್ಕೆ ತಿಳಿಸಿದರು. ಏಪ್ರಿಲ್ 8ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಯೋಗ ಗುರು ಬಾಬಾ ರಾಮ್‌ದೇವ್, ಪತಂಜಲಿ ಮುಖ್ಯಸ್ಥನಿಗೆ ಸುಪ್ರೀಂ ಸಮನ್ಸ್