ನಿನ್ನೆ ಬಳ್ಳಾರಿಯಲ್ಲಿ (Bellary) ನಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Raj Kumar) ಪುತ್ಥಳಿ ಅನಾವರಣ ವೇಳೆ ಗಾಯಕಿ ಮಂಗ್ಲಿ (Mangli) ಕಾರಿನ ಮೇಲೆ ಕಲ್ಲು ತೂರಲಾಗಿದೆ ಎನ್ನುವ ಸುದ್ದಿ ಹರಡಿತ್ತು. ಕಿಡಿಗೇಡಿಗಳು ಮಂಗ್ಲಿಗೆ ಮುತ್ತಿಗೆ ಹಾಕಿ, ಕಲ್ಲು ತೂರಾಟ ಮಾಡಿದರು ಎಂದು ಹೇಳಲಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದರು ಎನ್ನುವ ಸುದ್ದಿ ಸಾಕಷ್ಟು ಸದ್ದು ಮಾಡಿತ್ತು. ಈ ಕುರಿತು ಸ್ವತಃ ಮಂಗ್ಲಿ ಸ್ಪಷ್ಟನೇ ನೀಡಿದ್ದಾರೆ.
Advertisement
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ‘ನನ್ನ ಕಾರಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎನ್ನುವುದು ಸಂಪೂರ್ಣ ಸುಳ್ಳು. ಅದೊಂದು ಗಾಳಿಸುದ್ದಿ. ಆ ರೀತಿಯ ಘಟನೆ ಆಗಿಲ್ಲ. ನನ್ನ ಇಮೇಜ್ ಹಾಳು ಮಾಡಲು ಈ ರೀತಿ ಸುದ್ದಿ ಹಬ್ಬಿಸಿದ್ದಾರೆ. ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಪೊಲೀಸ್ ಇಲಾಖೆ ನನ್ನನ್ನು ಗೌರವಯುತವಾಗಿ ನೋಡಿಕೊಂಡಿದೆ. ಲಾಠಿಚಾರ್ಜ್ ಕೂಡ ಆಗಿಲ್ಲ. ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ’ ಎಂದು ಅವರು ಹೇಳಿದ್ದಾರೆ.
Advertisement
Advertisement
ಕಾರಿನ ಗಾಜು ಒಡೆದಿರುವುದಕ್ಕೆ ಬಳ್ಳಾರಿ ಎಸ್ಪಿ ರಂಜಿತಕುಮಾರ್ ಬಂಡಾರ (Ranjith Kumar Bandara) ಸ್ಪಷ್ಟನೆ ನೀಡಿದ್ದು, ‘ಕಾರಿನ ಮೇಲೆ ಯಾವುದೋ ಒಂದು ವಸ್ತು ಬಿದ್ದಿರುವ ಕಾರಣಕ್ಕಾಗಿ ಗಾಜು ಒಡೆದಿದೆ. ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನುವುದು ಸುಳ್ಳು. ಆ ರೀತಿಯ ಘಟನೆ ಆಗಿಲ್ಲ. ಪೊಲೀಸರು ಮತ್ತು ಅಭಿಮಾನಿಗಳ ನಡುವೆ ಯಾವುದೇ ವಾಗ್ವಾದ ನಡೆದಿಲ್ಲ’ ಎಂದಿದ್ದಾರೆ. ಇದನ್ನೂ ಓದಿ: ಸಿಹಿಸುದ್ದಿ ಹಂಚಿಕೊಂಡ `ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಾಕರ್- ಶೋಯೆಬ್ ಇಬ್ರಾಹಿಂ
Advertisement
ಮಂಗ್ಲಿ ಕನ್ನಡಿಗರಿಗೆ ಅಗೌರವ ತೋರಿದ್ದಾರೆ ಎನ್ನುವ ಕಾರಣಕ್ಕಾಗಿ ಈ ರೀತಿಯ ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗ್ಲಿ ‘ಕನ್ನಡ ಯಾಕೆ? ತೆಲುಗು ಬರತ್ತೆ’ ಎಂದು ಹೇಳಿಕೆ ನೀಡಿದ್ದರು. ಈ ಮಾತು ಕನ್ನಡಿಗರನ್ನು ಕೆರಳಿಸಿತ್ತು. ಈ ಕಾರಣಕ್ಕಾಗಿಯೇ ಕಲ್ಲು ತೂರಾಟ ಮಾಡಲಾಗಿದೆ ಎಂದು ಹೇಳಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k