ನವದೆಹಲಿ: ಭಾರತ (India) ಪಾಕಿಸ್ತಾನದ (Pakistan) ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ (Surgical Strike) ನಡೆಸಿದೆ ಎಂದು ವರದಿಯಾದ ಕೆಲವೇ ಗಂಟೆಗಳ ಬಳಿಕ ರಕ್ಷಣಾ ಸಚಿವಾಲಯ (Defense Ministry) ಇದನ್ನು ಸುಳ್ಳು ಎಂದು ಸ್ಪಷ್ಟಪಡಿಸಿದೆ. ಆದರೆ ಜಮ್ಮು ಮತ್ತು ಕಾಶ್ಮೀರದ ಬಾಲಾಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಪಾಕಿಸ್ತಾನದಿಂದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು (Terrorists) ಕೊಲ್ಲಲಾಗಿದೆ ಎಂದು ತಿಳಿಸಿದೆ.
ಸೋಮವಾರ ಬೆಳಗ್ಗೆ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಗುರುತಿಸಿ ಅವರನ್ನು ಕೊಲ್ಲಲಾಗಿದೆ. ಅವರು ಬಾಲಕೋಟ್ ವಲಯದ ಹಮೀರ್‌ಪುರ ಪ್ರದೇಶದಲ್ಲಿ ಪ್ರತಿಕೂಲ ಹವಾಮಾನ, ದಟ್ಟ ಮಂಜು, ದಟ್ಟ ಪೊದೆಗಳ ಅನುಕೂಲಗಳನ್ನು ಬಳಸಿಕೊಂಡು ಒಳನುಸುಳಲು ಪ್ರಯತ್ನಿಸುತ್ತಿದ್ದರು ಎಂದು ಸಚಿವಾಲಯ ತಿಳಿಸಿದೆ.
Advertisement
Advertisement
ವರದಿ ಏನಿತ್ತು?
ಮುಂಜಾನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಭಾರತಿಯ ಸೇನೆ ಶನಿವಾರ ರಾತ್ರಿ ಎಲ್‌ಒಸಿಯಾದ್ಯಂತ 2.5 ಕಿ.ಮೀ ಮುಂದಕ್ಕೆ ಪ್ರವೇಶಿಸಿ ಪಾಕಿಸ್ತಾನಿ ಭಯೋತ್ಪಾದಕರ 4 ಲಾಂಚಿಂಗ್ ಪ್ಯಾಡ್‌ಗಳನ್ನು ನಾಶಪಡಿಸಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಬುಧವಾರ ಆಗದಿದ್ರೆ ಆ.27ಕ್ಕೆ ಚಂದ್ರಯಾನ-3 ಲ್ಯಾಂಡಿಂಗ್
Advertisement
Advertisement
ಈ ಸರ್ಜಿಕಲ್ ಸ್ಟ್ರೈಕ್‌ನಲ್ಲಿ 7-8 ಭಯೋತ್ಪಾದಕರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಬಳಿಕ ಎಲ್ಲಾ ಸೈನಿಕರು ಸುರಕ್ಷಿತವಾಗಿ ಮರಳಿದ್ದಾರೆ ಎಂದು ಹೇಳಿತ್ತು. ಆದರೆ ಬಳಿಕ ರಕ್ಷಣಾ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ಈ ವರದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್
Web Stories