ಮುಂಬೈ: 1983ರಲ್ಲಿ ವಿಶ್ವಕಪ್ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡ ನೈಜ ಘಟನೆ ಆಧಾರಿತ ಚಿತ್ರ 83 ಗೆ ದೆಹಲಿ ಸರ್ಕಾರ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದೆ.
1983ರಲ್ಲಿ ಭಾರತ ಮೊದಲ ಬಾರಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ಕಥೆಯ ಆಧಾರದ ಮೇಲೆ ಸಿನಿಮಾವನ್ನು ರಚಿಸಲಾಗಿದೆ. ಕಪಿಲ್ ದೇವ್ ಅವರ ನಾಯಕತ್ವದಲ್ಲಿ ಭಾರತ ತಂಡ ಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ವಿಶ್ವಕಪ್ ಟ್ರೋಫಿಯನ್ನು ಪಡೆದಿತ್ತು. ಇದನ್ನೂ ಓದಿ: ಕಪಿಲ್ ದೇವ್ ಆಗಲು ನಿತ್ಯ 4 ಗಂಟೆ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ರಣವೀರ್ ಸಿಂಗ್!
Advertisement
Advertisement
ನಟ ರಣವೀರ್ ಸಿಂಗ್ ಅಭಿನಯದ ಚಿತ್ರ 83 ಟ್ಯಾಕ್ಸ್ ಫ್ರೀ ಆಗಿರಲಿದೆ ಎಂದು ನಿರ್ಮಾಪಕ ಕಬೀರ್ ಖಾನ್ ಮಂಗಳವಾರ ಘೋಷಿಸಿದ್ದಾರೆ. ರಿಲಯನ್ಸ್ ಎಂಟರ್ಟೈನ್ಮೆಂಟ್ ಮತ್ತು ಫ್ಯಾಂಟಮ್ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ 83 ಸಿನಿಮಾ ಹಿಂದಿ, ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಡಿಸೆಂಬರ್ 24ರಂದು ತೆರೆಕಾಣಲಿದೆ. ಇದನ್ನೂ ಓದಿ: ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ: ಹೇಮಾಮಾಲಿನಿ
Advertisement
ಚಿತ್ರದಲ್ಲಿ ತ್ರಿಪಾಟಿ, ತಾಹಿರ್ ರಾಜ್ ಭಾಸಿನ್, ಜೀವಾ, ಸಾಕಿಬ್ ಸಲೀಂ, ಜತಿನ್ ಸರ್ನಾ, ಚಿರಾಗ್ ಪಾಟೀಲ್, ದಿನಕರ್ ಶರ್ಮಾ, ನಿಶಾಂತ್ ದಹಿಯಾ ಹೀಗೆ ಹಲವರು ನಟಿಸಿದ್ದಾರೆ. ನಟಿ ದೀಪಿಕಾ ಪಡುಕೋಣೆ ವಿಶೇಷವಾಗಿ ಕಪಿಲ್ ಪತ್ನಿ ರೋಮಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.