ನವದೆಹಲಿ: ಶಿವಸೇನೆ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಮತ್ತು ಇತರ ಪಕ್ಷಗಳು ಸೇರಿ ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದಿಂದ ಜನರು ಸಂತೋಷವಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಯಾವುದೇ ಅಪಾಯವಿಲ್ಲ ಎಂದ ಅವರು, 2024ರ ರಾಷ್ಟ್ರೀಯ ಚುನಾವಣೆ ಮತ್ತು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು.
Advertisement
ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ನಂತರದ ದಿನದಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆಯನ್ನು ಭೇಟಿಯಾದ ತೆಲಂಗಾಣ CM ಕೆಸಿಆರ್
Advertisement
ಬಿಜೆಪಿ ನೀತಿಗಳ ವಿರುದ್ಧ ಹೋರಾಟ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಎತ್ತಿಹಿಡಿಯುವ ರಾವ್ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಠಾಕ್ರೆ ಇತ್ತೀಚಿಗೆ ಘೋಷಿಸಿದ್ದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ
ಹಲವು ವಿಷಯಗಳಿಂದ ಬಿಜೆಪಿ ಮತ್ತು ಕೇಂದ್ರವನ್ನು ಟೀಕಿಸುತ್ತಾ ಬಂದಿರುವ ತೆಲಂಗಾಣ ಸಿಎಂ, ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಲು ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಸಹವರ್ತಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದರು.