Bengaluru CityDistrictsKarnatakaLatestLeading NewsMain Post

ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಸಮಯವಿಲ್ಲ- ಸರ್ಕಾರದ ಹುದ್ದೆ ನಿರಾಕರಿಸಿದ ಸೂಲಿಬೆಲೆ

- 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ 21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲಾಗಿದೆ. ಶ್ರೀ ಗಳಗನಾಥ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನಕ್ಕೆ ಸೂಲಿಬೆಲೆ ಅವರಿಗೆ ಅಧ್ಯಕ್ಷ ಸ್ಥಾನ ನಿಡಲಾಗಿದ್ದು, ಆದರೆ ಚಕ್ರವರ್ತಿಯವರು ಈ ಹುದ್ದೆಯನ್ನು ನಿರಾಕರಿಸಿದ್ದಾರೆ.

ಈ ಸಂಬಂಧ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಎಡವಟ್ಟು – ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ

ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು. ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಹಾಲಿ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ಅಧ್ಯಕ್ಷರು, ಸದಸ್ಯರ ಅಧಿಕಾರದ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಇಂದು ಹೊಸ ನೇಮಕಾತಿ ಮಾಡಿ ಸರ್ಕಾರ ಆದೇಶ ಹೊರಡಿಸಿತು. ಒಟ್ಟು ಎಂಟು ಜನ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಇದರಲ್ಲಿ ಚಕ್ರವರ್ತಿ ಸೂಲಿಬೆಲೆಗೆ ಶ್ರೀ ಗಳಗನಾಥ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ ಈ ಹುದ್ದೆಯನ್ನು ಸೂಲಿಬೆಲೆ ನಿರಾಕರಿಸಿದ್ದಾರೆ.

ಸೂಲಿಬೆಲೆ ಅವರು ಇತ್ತೀಚೆಗೆ ಸರಣಿ ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್ ಮತ್ತಿತರರ ಮೇಲೆ ಟೀಕಿಸಿದ್ದರು. 23 ಹಿಂದೂ ಕಾರ್ಯಕರ್ತರ ಸಮಾಧಿ ಮೇಲೆ ಸರ್ಕಾರ ಬಂದಿದೆ ಎಂದು ತೀವ್ರ ಟೀಕೆ ಮಾಡಿದ್ದರು.

Live Tv

Leave a Reply

Your email address will not be published.

Back to top button