ಉಡುಪಿ: ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಹೇಳಿದೆ.
ಉಡುಪಿ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ಈವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ತಪಾಸಣೆ ನಡೆಯುತ್ತದೆ. ಕೇರಳ ರಾಜ್ಯದ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಆರೊಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?
ಏನಿದು ಘಟನೆ? – ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಜ್ವರ ಕಾಣಿಸಿಕೊಂಡಿದ್ದ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿತ್ತು.