ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. 5 ವರ್ಷನೂ ಎಚ್‍ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಿರಬೇಕು ಅಂತ ಮಾಜಿ ಮುಖ್ಯಮಂತ್ರಿ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸ ಪ್ರಸಿದ್ಧ ನಂದಿಗಿರಿಧಾಮದಲ್ಲಿ ನಂದಿ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ರು. ಈ ವೇಳೆ ಸಿಎಂ ಹುದ್ದೆ ಖಾಲಿ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಎಚ್‍ಡಿಕೆ 5 ವರ್ಷ ಅವಧಿ ಪೂರ್ಣ ಮಾಡಲಿದ್ದಾರೆ: ಸತೀಶ್ ಜಾರಕಿಹೊಳಿ
Advertisement
Advertisement
ಮುಖ್ಯಮಂತ್ರಿ ಸ್ಥಾನವನ್ನು ಎಚ್‍ಡಿ ಕುಮಾರಸ್ವಾಮಿ ಅವರು ಸಾಕಷ್ಟು ದಿನ ಪೂರೈಸುತ್ತಾರೆಯೋ ಇಲ್ಲವೋ ಎಂಬಂತಹ ಚರ್ಚೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಕೂಡ ಮತ್ತೆ ಸಿಎಂ ಆಗುತ್ತೇನೆ ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಈ ಮಧ್ಯೆ ವೀರಪ್ಪ ಮೊಯ್ಲಿ ಅವರೇ 5 ವರ್ಷಗಳ ಕಾಲ ಅಧಿಕಾರವನ್ನು ನಡೆಸುತ್ತಾರೆ. ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಅಂದ್ರು. ಇದನ್ನೂ ಓದಿ:
Advertisement
ಎಚ್‍ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಿ ಮುಂದುವರಿಯಬೇಕು ಅಂತ ಈಗಾಗಲೇ ಹೇಳಿಯಾಗಿದೆ. ಒಟ್ಟಿನಲ್ಲಿ ಎಚ್‍ಡಿಕೆ ಅಧಿಕಾರವಧಿ ಪೂರ್ಣಗೊಳಿಸುವುದಿಲ್ಲ ಎಂಬ ಚರ್ಚೆ ಅಪ್ರಸ್ತುತ ಅಂತ ಅವರು ಹೇಳಿದ್ರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv