ಮಂಡ್ಯ: ಇಷ್ಟು ವರ್ಷ ಬೇಸಿಗೆ ಕಾಲದಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗದ ಕಾರಣ ಮಂಡ್ಯ ಜಿಲ್ಲೆಯ ರೈತರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದರು. ಆದರೆ ಇದೀಗ ಈ ಬಾರಿ ದಾಖಲೆ ಪ್ರಮಾಣದಲ್ಲಿ ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾದರು ಸಹ ಮಂಡ್ಯ ಜಿಲ್ಲೆಯ ರೈತರು ಆತಂಕದ ಪರಿಸ್ಥಿತಿ ಎದುರಾಗಿದೆ.
Advertisement
ಕೆಆರ್‌ಎಸ್‌ನಿಂದ ಬೇಸಿಗೆ ಬೆಳೆಗೆ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ವಿಳಂಬ ಧೋರಣೆ ಅನುಸರಿಸುತ್ತಿವೆ. ಹೀಗಾಗಲೇ ಮಂಡ್ಯ ಭಾಗದ ರೈತರು ಭತ್ತ ಬಿತ್ತನೆ ಮಾಡಿದ್ದು, ನೀರಿಗಾಗಿ ಕಾಯುತ್ತಿದ್ದಾರೆ. ಹಲವು ವರ್ಷಗಳಿಂದ ಕೆಆರ್‌ಎಸ್ ಡ್ಯಾಂ ಭರ್ತಿಯಾಗದ ಕಾರಣ ರೈತರು ಬೇಸಿಗೆ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈ ಬಾರಿ ಸುರಿದ ಭಾರೀ ಮಳೆಯಿಂದ ದಾಖಲೆ ಪ್ರಮಾಣದಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ.
Advertisement
Advertisement
ಜಲಾಶಯ ಭರ್ತಿಯಾದರು ಸಹ ರೈತರಿಗೆ ನೀರು ಬಿಡಲು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಲೇ ಮಂಡ್ಯ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳು ಬಾಗಿಲು ಹಾಕಿರುವ ಪರಿಣಾಮ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಈಗ ಡ್ಯಾಂನಲ್ಲಿ ನೀರಿದ್ದರೂ ಬೇಸಿಗೆ ಬೆಳೆಗೆ ನೀರು ಹರಿಸುತ್ತಿಲ್ಲ. ಇದರಿಂದ ರೈತರ ಸ್ಥಿತಿ ಶೋಚನೀಯವಾಗಿದೆ.
Advertisement
ಸರ್ಕಾರ ಹಾಗೂ ಜಿಲ್ಲಾಡಳಿತ ರೈತರ ಸ್ಥಿತಿಯ ಬಗ್ಗೆ ಗಮನಹರಿಸಿ ರೈತರ ಬೇಸಿಗೆ ಬೆಳೆಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಆಗ್ರಹಿಸುತ್ತಿದ್ದಾರೆ.