ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

Public TV
1 Min Read
CM Siddaramaiah Residence Tree Fall

– ರಸ್ತೆಯಲ್ಲಿ ಹೋಗ್ತಿದ್ದ ಟಿಟಿ, ಇನ್ನೋವಾ ಮೇಲೆ ಬಿದ್ದ ಕೊಂಬೆಗಳು

ಬೆಂಗಳೂರು: ಗಾಳಿ ಇಲ್ಲ, ಮಳೆ ಇಲ್ಲ ಅಂದ್ರೂ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು (Tree) ಧರೆಗುರುಳಿ ಅನಾಹುತ ಸಂಭವಿಸಿದೆ.

ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವು

ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. 29 ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಇದನ್ನೂ ಓದಿ: ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನ

Share This Article