ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

Public TV
1 Min Read
Modi

ಬರ್ಲಿನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾರೂ ಕೂಡ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬರ್ಲಿನ್‍ನಲ್ಲಿ ತಿಳಿಸಿದ್ದಾರೆ.

ಈ ಯುದ್ಧದಲ್ಲಿ ಯಾರು ವಿಜೇತರಾಗಿರುವುದಿಲ್ಲ ಮತ್ತು ಇದರಿಂದಾಗಿ ಎಲ್ಲರೂ ನಷ್ಟವನ್ನು ಅನುಭವಿಸಿರುತ್ತಾರೆ. ಆದ್ದರಿಂದ ನಾವು ಶಾಂತಿ ಪರವಾಗಿದ್ದೇವೆ ಎಂದು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಸಭೆಯ ನಂತರ ಹೇಳಿದ್ದಾರೆ.

modi 1

ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಾಗುತ್ತಿದೆ. ಇದು ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಬೆಳವಣಿಗೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಗಂಭೀರ ವಿಚಾರವಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

Russia Ukraine War 4

60ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಫೆಬ್ರವರಿ 24ರಂದು ರಷ್ಯಾ, ಉಕ್ರೇನ್ ಮೇಲೆ ದಾಳಿಯನ್ನು ಆರಂಭಿಸಿದ್ದರಿಂದ ಸಾವಿರಾರು ನಾಗರಿಕರು ಸಾವನ್ನಪ್ಪಿದರು ಮತ್ತು ಲಕ್ಷಾಂತರ ಮಂದಿ ಸ್ಥಳಾಂತರಗೊಂಡರು. ಉಕ್ರೇನ್‍ನಲ್ಲಿ ಆರ್ಥಿಕ ಬಿಕ್ಕಟ್ಟು ಆರಂಭವಾದಗಲಿಂದಲೂ, ನಾವು ತಕ್ಷಣ ಕದನ ವಿರಾಮಕ್ಕೆ ಕರೆ ನೀಡಿದ್ದೆವು. ವಿವಾದವನ್ನು ಪರಿಹರಿಸಲು ಮಾತುಕತೆಯೇ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

ಪ್ರಧಾನಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ 3 ವಿದೇಶಗಳ ಪ್ರವಾಸ ಕೈಗೊಂಡಿದ್ದಾರೆ. ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರ ಆಮಂತ್ರಣದ ಮೇರೆಗೆ ಮೋದಿ ಮೇ. 2 ರಂದು ಬರ್ಲಿನ್‍ಗೆ ಭೇಟಿ ನೀಡಿದ್ದಾರೆ. ಅಲ್ಲಿ 6 ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಮೋದಿ ಸಹ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಅಲ್ಲದೇ ವಾಣಿಜ್ಯ ದುಂಡುಮೇಜಿನ ಸಭೆಯಲ್ಲಿ ಕೈಗಾರಿಕಾ ಸಹಕಾರದ ಮೂಲಕ ಕೋವಿಡ್ ನಂತರದ ಸಮಯದಲ್ಲಿ ಉಭಯ ದೇಶಗಳ ಆರ್ಥಿಕತೆಯ ಪುನಶ್ಚೇತನದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *