ಬೆಂಗಳೂರು: ತುಷ್ಟೀಕರಣದ ಉತ್ತುಂಗಕ್ಕೆ ತಲುಪಿರುವ ಸಿದ್ದರಾಮಯ್ಯ (Siddaramaiah) ಸಾಹೇಬರು ನಾಳೆ ಯತೀಂದ್ರ (Yatindra) ಅವರಿಗೆ ಟಿಪ್ಪು(Tippu) ಎಂದು ನಾಮಕರಣ ಮಾಡಿದರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಹೇಳಿದೆ.
ಕಾಂಗ್ರೆಸ್ (Congres) ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್ ನೀಡಿದೆ. ಇದನ್ನೂ ಓದಿ: ಮೈಸೂರು ಬಿಟ್ಟು ಹೊರಗಡೆ ತೆರಳಬೇಡಿ: ಮನೋರಂಜನ್ ಕುಟುಂಬಕ್ಕೆ ಗುಪ್ತಚರ ಇಲಾಖೆ ಸೂಚನೆ
ಪೋಸ್ಟ್‌ನಲ್ಲಿ ಏನಿದೆ?
ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ರೂ. ಕೊಡುತ್ತಿರುವ ಸಿದ್ದರಾಮಯ್ಯನವರು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು – ಮೈಸೂರಿನಲ್ಲಿ ಟಿಪ್ಪು ವಿಮಾನ ನಿಲ್ದಾಣ, ವಿಧಾನಸೌಧಕ್ಕೆ ಟಿಪ್ಪು ಸೌಧವೆಂದು ಮರು ನಾಮಕರಣ, ಮೈಸೂರು ವಿವಿಗೆ ಟಿಪ್ಪು ಹೆಸರು, ಟಿಪ್ಪುವಿನ 108 ಅಡಿ ಪ್ರತಿಮೆ, ಟಿಪ್ಪು ಮದ್ಯದ ಬಾಟಲಿ, ಬಿಎಂಟಿಸಿ/ಕೆಎಸ್‌ಆರ್‌ಟಿಸಿಗೆ ಟಿಪ್ಪು ಸಾರಿಗೆ ಎಂಬ ಹೆಸರು. ಇದನ್ನೂ ಓದಿ: ಟಿಪ್ಪುವಿನ ಹೆಸರನ್ನು ಶೌಚಾಲಯಗಳಿಗೆ ಇಡಬೇಕು: ಯತ್ನಾಳ್
ವ