ಬೆಂಗಳೂರು: ತಮ್ಮ ತಾಯಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಹೇಳಿದರು.
ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಹೆಚ್‌ಡಿಕೆ, ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ ಎಂದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ಕೊಡುವಂತೆ ಯಾರೂ ಆಗ್ರಹಿಸಬೇಡಿ: ಸಿದ್ದಲಿಂಗ ಸ್ವಾಮೀಜಿ
Advertisement
Advertisement
ದೇವೇಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಮಹತ್ವ ಕೊಟ್ಟಿಲ್ಲ. ನಾವು ಕೂಡಾ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು ಅಷ್ಟೇ ಎಂದರು. ಇದನ್ನೂ ಓದಿ: ಗುತ್ತಿಗೆದಾರರು ಪರ್ಸಂಟೇಜ್ ಕೊಡುವುದು ನಿಲ್ಲಿಸಿ ಎಲ್ಲವೂ ಸರಿ ಹೋಗುತ್ತದೆ: ಎಚ್‍ಡಿಕೆ
Advertisement
ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ಆದಾಯ ತೆರಿಗೆ ಬಗ್ಗೆ ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರುತ್ತಾರೆ. ಆ ವಿವರಗಳನ್ನು ಸಲ್ಲಿಕೆ ಮಾಡಿದರೆ ಆಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.