ಗಾಂಧಿನಗರ: ಯಾರಿಂದಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿಆದಿತ್ಯನಾಥ್ ಅವರ ಜೋಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶದ ರಾಜ್ಯಪಾಲ ಆನಂದಬೆನ್ ಪಟೇಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‍ನ ಸೂರತ್‍ನಲ್ಲಿ ನೆಲೆಸಿರುವ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಭಾರತೀಯರು ನೆಲೆಸಿದ್ದಾರೆ. ಇವರೆಲ್ಲರ ಬೆಂಬಲದಿಂದಾಗಿ ಉತ್ತರಪ್ರದೇಶದಲ್ಲಿ ಬಿಜೆಪಿಯೂ ಅಧಿಕಾರವನ್ನು ಉಳಿಸಿಕೊಂಡಿದೆ ಎಂದರು.
Advertisement
Advertisement
ಈ ತಿಂಗಳ ಆರಂಭದಲ್ಲಿ ನಡೆದ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 403 ಸ್ಥಾನಗಳಲ್ಲಿ 255 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೊತೆಗೆ ಮಿತ್ರ ಪಕ್ಷಗಳಾದ ನಿಶಾದ್ ಪಕ್ಷ ಮತ್ತು ಅಪ್ನಾ ದಳ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಇದರಿಂದಾಗಿ ಬಿಜೆಪಿ ಪುನಃ ಸರ್ಕಾರವನ್ನು ರಚಿಸುವ ಮೂಲಕ 2ನೇ ಬಾರಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಮೂರು ದಶಕಗಳಲ್ಲಿ ಒಂದೇ ಪಕ್ಷವು ಸತತ 2 ಬಾರಿ ಗೆದ್ದಿರುವುದು ಇದೇ ಮೊದಲ ಬಾರಿಗೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣ: ಗಡ್ಕರಿ
Advertisement
ಉತ್ತರಪ್ರದೇಶದಲ್ಲಿ ನಾವು ಸರ್ಕಾರ ರಚಿಸಿದ್ದೇವೆ. ಮೋದಿ, ಯೋಗಿ ಜೋಡಿಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ. ಸೂರತ್‍ನಿಂದ ಹಲವಾರು ಜನರು ಪ್ರಚಾರಕ್ಕಾಗಿ ಉತ್ತರಪ್ರದೇಶಕ್ಕೆ ಹೋಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸ್ಟಾಲಿನ್ ಸಿಎಂ ಆದ ಬಳಿಕ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ: ಎಡಪಾಡಿ ಕೆ.ಪಳನಿಸ್ವಾಮಿ