ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ: ಅಮಿತ್ ಶಾ

Public TV
2 Min Read
Amit Shah

– ಅಮಿತ್ ಶಾ ಭೇಟಿಗೆ ಚೀನಾ ವಿರೋಧ

ಇಟಾನಗರ: ಅರುಣಾಚಲ ಪ್ರದೇಶ ಭೇಟಿಗೆ ಚೀನಾ (China) ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದರು.

ಅರುಣಾಚಲ ಪ್ರದೇಶದ (Arunachal Pradesh) ಗಡಿ ಗ್ರಾಮವಾದ ಕಿಬಿತೂದಿಂದ ವೈಬ್ರಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲು ಸಾಧ್ಯವಿಲ್ಲ. 2014ರ ಮೊದಲು, ಇಡೀ ಈಶಾನ್ಯ ಪ್ರದೇಶವು ಪ್ರಕ್ಷುಬ್ಧ ಪ್ರದೇಶವೆಂದು ಕರೆಯಲ್ಪಟ್ಟಿತು. ಆದರೆ ಕಳೆದ 9 ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ಯೋಜನೆಯಿಂದಾಗಿ, ಈಶಾನ್ಯವನ್ನು ಈಗ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರದೇಶವೆಂದು ಪರಿಗಣಿಸಲಾಗಿದೆ ಎಂದು ಹೇಳಿದರು.

Amit Shah 1 2

ಐಟಿಬಿಪಿ ಯೋಧರು ಹಾಗೂ ಸೇನೆಯು ನಮ್ಮ ಗಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರಣದಿಂದ ಇಂದು ದೇಶದ ಜನರು ಅವರ ಮನೆಗಳಲ್ಲಿ ಶಾಂತಿಯುತವಾಗಿ ಮಲಗಲು ಸಾಧ್ಯವಾಗಿದೆ ಎಂದು ಇಂದು ನಾವು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದು ಸೇನೆ ಹಾಗೂ ಗಡಿ ಪೊಲೀಸರನ್ನು ಶ್ಲಾಘಿಸಿದರು.

india china BORDER LAC 1

ಕಳೆದ ವಾರ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳನ್ನು ಚೀನಾ ತನ್ನ ಭೂಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಮೂಲಕ ಮರುನಾಮಕರಣ ಮಾಡಿದೆ. ಅಷ್ಟೇ ಅಲ್ಲದೇ ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯನ್ನು ಚೀನಾ ದೃಢವಾಗಿ ವಿರೋಧಿಸುತ್ತದೆ. ಈ ಪ್ರದೇಶದಲ್ಲಿ ಅವರ ಚಟುವಟಿಕೆಗಳು ಬೀಜಿಂಗ್‍ನ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ಇದನ್ನೂ ಓದಿ: `ನಂದಿನಿ’ ನಮ್ಮವಳು – ನಮ್ಮ ಹಾಲು ನಮ್ಮ ಬದುಕು; ನಂದಿನಿ ಉಳಿಸಿ ಎಂದ ಡಿಕೆಶಿ

India vs China

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರ ವಾಂಗ್ ವೆನ್ಬಿನ್ ಮಾತನಾಡಿ, ಜಾಂಗ್ನಾನ್ ಚೀನಾದ ಪ್ರದೇಶವಾಗಿದೆ. ಜಂಗ್ನಾನ್‍ಗೆ ಭಾರತೀಯ ಅಧಿಕಾರಿಯ ಭೇಟಿಯು ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ. ಗಡಿ ಪರಿಸ್ಥಿತಿಯ ಶಾಂತಿ ಮತ್ತು ನೆಮ್ಮದಿಗೆ ಅನುಕೂಲಕರವಾಗಿಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ನನಗೆ ಟಿಕೆಟ್ ಸಿಗೋ ವಿಶ್ವಾಸವಿದೆ, ಯಾರಿಗೆ ಸಿಕ್ಕಿದ್ರೂ ಒಟ್ಟಾಗಿ ಕೆಲಸ ಮಾಡ್ತೀವಿ: ಸ್ವರೂಪ್

Share This Article