ಮೈಸೂರು: ಜೂನ್ 1ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ (Electricity Bill) ಬಂದರೆ ಬಿಲ್ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಹೆಚ್ಚುವರಿ ಬಳಸುತ್ತೀರೋ ಅದಕ್ಕೆ ಮಾತ್ರ ಬಿಲ್ ಕಟ್ಟಿ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ರಾಜ್ಯದ ಜನತೆಗೆ ತಿಳಿಸಿದ್ದಾರೆ.
ಮೈಸೂರಿನಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಮುಖ ನೋಡಿ ಯಾರೂ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ (Guarantee Card) ನೋಡಿ ಮತ ಹಾಕಿದ್ದಾರೆ, ಅದು ನೆನಪಿರಲಿ. ನಾವು ಸೋತಿದ್ದೇವೆ, ಸತ್ತಿಲ್ಲ. ಕೊಟ್ಟ ಭರವಸೆ ಈಡೇರಿಸಿ. ಜೂನ್ 1ರವರೆಗೆ ಕಾಯುತ್ತೇನೆ. ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಜೂನ್ 1ರಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್ ಪಾತ್ರ ತಿರುಗೇಟು
Advertisement
Advertisement
ರಾಜಸ್ಥಾನದಲ್ಲಿ (Rajasthan) ಕಾಂಗ್ರೆಸ್ ಇದೇ ರೀತಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಇದು ಜಾರಿಯಾಗಿಲ್ಲ. ಸಿದ್ದರಾಮಯ್ಯ (Siddaramaiah) ಅಥವಾ ನಾನು ಯಾರೂ ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಎನ್ನುವುದು ಯಾರ ಸ್ವತ್ತೂ ಅಲ್ಲ. ಆದರೆ ಪೊಲೀಸ್ ವ್ಯವಸ್ಥೆ ಎನ್ನುವುದು ಶಾಶ್ವತವಾಗಿ ಇರುತ್ತದೆ. ವಿಧಾನಸೌಧದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ? ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದನ್ನು ನಿಲ್ಲಿಸಿ. ಫೆಬ್ರವರಿಯಲ್ಲಿ ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಈಗ ಧಮ್ಕಿ ಹಾಕಿ ಎಫ್‌ಐಆರ್ (FIR) ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 200 ಯೂನಿಟ್ ಫ್ರೀ – ವಿದ್ಯುತ್ ಉಪಕರಣ ಖರೀದಿಗೆ ಫುಲ್ ಡಿಮ್ಯಾಂಡ್
Advertisement
ವಿಧಾನಸಭಾ ಚುನವಣಾ ಫಲಿತಾಂಶದ ಪರಿಣಾಮ ಲೋಕಸಭಾ ಚುನಾವಣೆಯ ಮೇಲೆ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಎಂಬುದು ಕನ್ನಡಿಗರಿಗೆ ಗೊತ್ತಿದೆ. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ (BJP) ಎಚ್ಚೆತ್ತುಕೊಳ್ಳಬೇಕಿತ್ತು. ಅವತ್ತು ಎಚ್ಚೆತ್ತುಕೊಂಡಿದ್ದರೆ ಬಿಜೆಪಿಗೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಸ್ಕೀಂ ಪರ ನಾನಿದ್ದೇನೆ. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ. ಗ್ಯಾರಂಟಿ ಕಾರ್ಡ್‌ನಲ್ಲಿ ಷರತ್ತು ಅನ್ವಯ ಎಂದು ಎಲ್ಲಿಯೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ
Advertisement
ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಕಾಲು ಬೇಕಾದರೂ ಹಿಡಿಯುತ್ತೇನೆ. ಮೈಸೂರು ಮತ್ತು ಕೊಡಗು (Kodagu) ಅಭಿವೃದ್ಧಿಗಾಗಿ ಕೈಕಾಲು ಹಿಡಿದು ಅಂಗಲಾಚುತ್ತೇನೆ. ಚುನಾವಣೆ ಬಂದಾಗ ರಾಜಕಾರಣ ಮಾಡೋಣ. ಉಳಿದ ಸಮಯದಲ್ಲಿ ಅಭಿವೃದ್ಧಿ ರಾಜಕಾರಣ ಮಾಡೋಣ. ಈ ಕುರಿತು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ಅಭಿವೃದ್ಧಿ ಪರ ಇರುವವರನ್ನು ಜಿಲ್ಲಾ ಉಸ್ತುವಾರಿ ಮಾಡಿ. ಅಭಿವೃದ್ಧಿ ವಿಚಾರದಲ್ಲಿ ನಾನು ಸಿಎಂ ಮನೆಗೆ ಹೋಗುತ್ತೇನೆ ಎಂದರು. ಇದನ್ನೂ ಓದಿ: ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್