ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹತ್ತಿರ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸರಿಸಾಟಿ ಯಾರು ಇಲ್ಲ ಎಂದ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ (Tamil Nadu Congress) ಶೋಕಾಸ್ (show cause) ನೋಟಿಸ್ ನೀಡಿದೆ.
ಇದು ಪಕ್ಷದ ಹೇಳಿಕೆಯಲ್ಲ ಇದು ವೈಯಕ್ತಿಕ ಹೇಳಿಕೆ ಎಂದು ಹೇಳುವ ಮೂಲಕ ತಮಿಳುನಾಡು ಕಾಂಗ್ರೆಸ್ ಕಾರ್ತಿ ಚಿದಂಬರಂ (Karti Chidambaram) ಹೇಳಿಕೆಯಿಂದ ದೂರ ಉಳಿದಿದೆ. ಇದನ್ನೂ ಓದಿ: 8 ಕೆಜಿ ಬೆಳ್ಳಿ ಪಾದುಕೆ ಹೊತ್ತು 7,200 km ಪಾದಯಾತ್ರೆ – 64ರ ವೃದ್ಧನ ಭಕ್ತಿಗೆ ರಾಮನ ಭಕ್ತರಿಂದ ಮೆಚ್ಚುಗೆ
ಕಾರ್ತಿ ಚಿದಂಬರಂ ಎಐಸಿಸಿ ಸದಸ್ಯರಾಗಿದ್ದು ಹೈಕಮಾಂಡ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವ ಅಧಿಕಾರ ರಾಜ್ಯ ಕಾಂಗ್ರೆಸ್‌ಗೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶೋಕಾಸ್ ನೋಟಿಸ್ ನೀಡಿದ್ದರೂ ಇಲ್ಲಿಯವರೆಗೆ ತಮಿಳುನಾಡು ಕಾಂಗ್ರೆಸ್ ನಾಯಕರು ಯಾರೂ ಸಾರ್ವಜನಿಕವಾಗಿ ಈ ವಿಚಾರದ ಬಗ್ಗೆ ಮಾತನಾಡಿಲ್ಲ.
ತಮಿಳುನಾಡು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಮೇಲೆ ಕಾರ್ತಿ ಚಿದಂಬರಂ ಕಣ್ಣಿಟ್ಟಿದ್ದಾರೆ. ಪ್ರಸ್ತುತ ಕೆ.ಎಸ್ ಅಳಗಿರಿ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಮೊದಲು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇವರ 3 ವರ್ಷದ ಅವಧಿ ಅಂತ್ಯಗೊಂಡಿದ್ದರೂ ಯಾರು ಪ್ರಬಲ ನಾಯಕರು ಇಲ್ಲದ ಕಾರಣ ಮತ್ತೆ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಈಗ ಮೋದಿ ಕುರಿತ ನೀಡಿದ ಹೇಳಿಕೆಯಿಂದ ಕಾರ್ತಿ ಚಿದಂಬರಂಗೆ ಹಿನ್ನಡೆಯಾಗಿದೆ. ಇದನ್ನೂ ಓದಿ: ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?
ಕಾರ್ತಿ ಚಿದಂಬರಂ ಹೇಳಿದ್ದೇನು?
ಸಂದರ್ಶನದಲ್ಲಿ ರಾಹುಲ್ ಗಾಂಧಿ ಪ್ರಬಲ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿಯಾಗಲಿ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಾಗಲಿ ನರೇಂದ್ರ ಮೋದಿ ಪ್ರಚಾರ ಕೌಶಲ್ಯಕ್ಕೆ ಸರಿಸಾಟಿಯಲ್ಲ. ನನ್ನ ತಿಳುವಳಿಕೆಯ ಪ್ರಕಾರ ಪ್ರಚಾರ ಕೌಶಲ್ಯದಲ್ಲಿ ಮೋದಿಯನ್ನು ಸೋಲಿಸುವುದು ಸಾಧ್ಯವಿಲ್ಲ ಎಂದಿದ್ದರು.
ರಾಹುಲ್ ಗಾಂಧಿ ಮೋದಿಗೆ ಸಾಟಿಯಾಗುತ್ತಾರೆಯೇ ಎಂಬ ಪ್ರಶ್ನೆಗೆ ‘ಕಷ್ಟ’ ಎಂದು ಉತ್ತರಿಸಿದ್ದರು. ನಮ್ಮ ಪ್ರಧಾನಿ ಅಭ್ಯರ್ಥಿ ಕುರಿತು ಸಾರ್ವಜನಿಕ ಸಂದೇಶವನ್ನು ಶೀಘ್ರವೇ ನೀಡುವುದು ಅಗತ್ಯವಾಗಿದೆ. ಚುನಾವಣೆಯ ಕೊನೆ ಕ್ಷಣಗಳಲ್ಲಿ ನಮ್ಮ ಭರವಸೆಗಳು ಮತ್ತು ಯೋಜನೆಗಳನ್ನು ಘೋಷಿಸಬಾರದು. ಕನಿಷ್ಠ ನಾಲ್ಕರಿಂದ ಆರು ತಿಂಗಳು ಮೊದಲೇ ಘೋಷಣೆ ಮಾಡಬೇಕು. ಈ ರೀತಿ ಮಾಡಿದಾಗ ನಾವು ಜನರ ಮನಸ್ಸಿಗೆ ಮುಟ್ಟಲು ಸಾಧ್ಯವಾಗುತ್ತದೆ ಎಂದು ಉತ್ತರಿಸಿದ್ದರು.