ಬೆಂಗಳೂರು: ನವದೆಹಲಿಯಲ್ಲಿ (New Delhi) ನಡೆಯಲಿರುವ ಗಣರಾಜ್ಯೋತ್ಸವ (Republic Day) ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅವಕಾಶ ನಿರಾಕರಿಸಿರುವುದಕ್ಕೆ ಸ್ತಬ್ದಚಿತ್ರ ನೋಡೆಲ್ ಅಧಿಕಾರಿ ಸಿ.ಆರ್.ನವೀನ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕಳೆದ 8 ವರ್ಷಗಳಲ್ಲಿ ಭಾಗವಹಿಸುವ ಅವಕಾಶ ದೊರೆಯದ ಹಾಗೂ ಅತಿ ಕಡಿಮೆ ಬಾರಿ ಪಾಲ್ಗೊಂಡ ರಾಜ್ಯಗಳಿಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ
Advertisement
Advertisement
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವ ಅವಕಾಶ ದೊರೆತಿಲ್ಲ ಎಂದು ತಿಳಿಸಿದ್ದಾರೆ.
Advertisement
ಕಳೆದ ವರ್ಷದ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯಗಳ ಪಟ್ಟಿ ಹಾಗೂ ಈ ಬಾರಿ ಆಯ್ಕೆಯಾಗಿರುವ ರಾಜ್ಯಗಳ ಪಟ್ಟಿಯನ್ನು ಗಮನಿಸಿದರೆ, 2022ರಲ್ಲಿ ಮೊದಲ ಮೂರು ಬಹುಮಾನ ಪಡೆದ ರಾಜ್ಯಗಳು ಈ ಬಾರಿ ಆಯ್ಕೆಯಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಭಾಗವಹಿಸಿದ್ದ ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ, ಇನ್ನುಳಿದ ರಾಜ್ಯಗಳು ಆಯ್ಕೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ HDK ಆಕ್ರೋಶ
Advertisement
ಈ ಬಾರಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಿಪಕ್ಷಗಳು ಟೀಕಾಪ್ರಹಾರ ನಡೆಸಿದ್ದವು. ಇದರ ಬೆನ್ನಲ್ಲೇ ಸ್ತಬ್ಧಚಿತ್ರ ನೋಡೆಲ್ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k