ನೊಯ್ಡಾ: ಡ್ರಾಪ್ ಮಾಡುವ ನೆಪದಲ್ಲಿ ಚಲಿಸುತ್ತಿರುವ ಕಾರಿನಲ್ಲಿಯೇ 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆಯ ಕ್ಲಾಸ್ ಮೇಟ್ ಸೇರಿ ಮೂವರು ಅತ್ಯಾಚಾರವೆಸಗಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.
ಈ ಘಟನೆ ಗ್ರೇಟರ್ ನೊಯ್ಡಾದಲ್ಲಿ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ಕುರಿತು ಈಗಾಗಲೇ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ವೆಯಾದ ಮೂರೇ ದಿನಕ್ಕೆ ಸ್ನೇಹಿತರ ಜೊತೆ ಸೇರಿ ಪತ್ನಿಯ ಮೇಲೆ ಗ್ಯಾಂಗ್‍ರೇಪ್
Advertisement
ಕಳೆದ ಬುಧವಾರದಂದು ಶಾಲೆಯಿಂದ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಶಾಲಾ ಬಸ್ ಮಿಸ್ ಆಗಿತ್ತು. ಈ ಸಂದರ್ಭದಲ್ಲಿ ನನ್ನ ಕ್ಲಾಸ್ ಮೇಟ್ ಸೇರಿ ಮೂವರು ಡ್ರಾಪ್ ಕೊಡುವುದಾಗಿ ಒತ್ತಡ ಹೇರಿದ್ರು. ಹೀಗಾಗಿ ನಾನು ಇದಕ್ಕೆ ಒಪ್ಪಿದೆ. ಕಾರಿನಲ್ಲಿ ಬರುತ್ತಿದ್ದ ವೇಳೆ ಅವರು ಮತ್ತು ಬರುವ ಪಾನೀಯವನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ. ಬಳಿಕ ಕೈ-ಕಾಲು ಕಟ್ಟಿ ಹಾಕಿ, ಬಾಯಿ ಮುಚ್ಚಿಸಿ ನನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಅಂತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಪತ್ನಿಯ ಗುಪ್ತಾಂಗಕ್ಕೆ ಒದ್ದು, ಚಾಕು ಇರಿದ ಪತಿ
Advertisement
ಇತ್ತ ಬಾಲಕಿ ಶಾಲೆಯಿಂದ ಮನೆಗೆ ವಾಪಸ್ಸಾಗದಿದ್ದರಿಂದ ಗಾಬರಿಗೊಂಡ ಹೆತ್ತವರು ಪೊಲೀಸರಿಗೆ ಏಪ್ರಿಲ್ 18 ರಂದು ದೂರು ನೀಡಿದ್ದರು. ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ ಅಂತ ಹಿರಿಯ ಪೊಲೀಸ್ ಅಧಿಕಾರಿ ಅವ್ನೀಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ವರನ 11 ವರ್ಷದ ಸೋದರಿಯನ್ನು ರೇಪ್ ಮಾಡಿ, ಕೊಲೆಗೈದ!
Advertisement
12 ವರ್ಷ ವಯಸ್ಸಿನ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಗಲ್ಲು ಶಿಕ್ಷೆ ಹಾಗೂ ಇಂತಹ ಪ್ರಕರಣಗಳ ವಿಚಾರಣೆ ವೇಗವಾಗಿ ನಡೆಯಲು ವಿಶೇಷ ಕ್ರಮಗೊಳ್ಳಲಾಗಿದೆ. 16 ಕೆಳಗಿನ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿದರೆ ಇದುವರೆಗೂ ವಿಧಿಸುತ್ತಿದ್ದ 10 ವರ್ಷಗಳ ಕನಿಷ್ಠ ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದ್ದು, ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಜೀವವಾಧಿ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದೆ.