ನೊಯ್ಡಾ: ಇಲ್ಲಿನ ಗೌತಮ್ ಬುದ್ಧ್ ನಗರದ ದಾದ್ರಿ ಪ್ರದೇಶದಲ್ಲಿ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಕಾಮುಕ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ನೀಡಿದ ದೂರಿನಂತೆ ದಾದ್ರಿ ಪೊಲೀಸರು 40 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ.
Advertisement
ದಂಪತಿ ಮಧ್ಯೆ ಮದುವೆಯಾದಾಗಿಂದಲೂ ಸಣ್ಣ ಪುಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಜಗಳಗಳು ನಡೆಯುತ್ತಿತ್ತು. ಅಂತೆಯೇ ಶನಿವಾರ ರಾತ್ರಿಯೂ ಇವರಿಬ್ಬರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಹೀಗಾಗಿ ಪತ್ನಿ ನಿದ್ರೆಗೆ ಜಾರಿದ ಬಳಿಕ ಪತಿ ತಮ್ಮ 13 ವರ್ಷದ ಮಗಳನ್ನು ಕರೆದುಕೊಂಡು ಮಧ್ಯರಾತ್ರಿ ಹೊರಗೆ ಹೋಗಿದ್ದಾನೆ. ಅಲ್ಲದೇ ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಅಂತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
Advertisement
ಈ ವಿಚಾರವನ್ನು ಸಂತ್ರಸ್ತೆ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾಳೆ. ಪತಿಯ ನೀಚ ಕೃತ್ಯದಿಂದ ಗಾಬರಿಗೊಂಡ ತಾಯಿ ಕೂಡಲೇ ದಾದ್ರಿ ಪೊಲೀಸ್ ಠಾಣೆಗೆ ತೆರಳಿ ಪತಿ ವಿರುದ್ಧವೇ ದೂರು ದಾಖಲಿಸಿದ್ದಾರೆ.
Advertisement
ಸದ್ಯ ಆರೋಪಿ ತಂದೆಯ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇತ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಅಂತ ಅವರು ವಿವರಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv