ಲಕ್ನೋ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ಟೈಲರ್ ಹತ್ಯೆಯ ನೈಜ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆಗೆದುಹಾಕಲಾಗಿದೆ.
ಇದಕ್ಕೂ ಮುನ್ನ ಕನ್ಹಯ್ಯಾಲಾಲ್ ಹತ್ಯೆಯ ವೀಡಿಯೋವನ್ನು ಲೈಕ್ ಮಾಡಿದ್ದಲ್ಲದೇ, ಹತ್ಯೆಯನ್ನು ಹೊಗಳಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಛಪ್ರೌಲಿ ನಿವಾಸಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್
Advertisement
Advertisement
ಕನ್ಹಯ್ಯಾಲಾಲ್ ಶಿರಚ್ಛೇದನದ ವಿಡಿಯೋ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಆರೋಪಿ ಯೂಸುಫ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 505(2)/295ಂ (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆಗಳು ಹಾಗೂ ಅಪರಾಧಿಕ ಭಯೋತ್ಪಾದನೆಗೆ ದಂಡನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
Advertisement
ಯೂಸುಫ್‌ಖಾನ್ ಫೇಸ್‌ಬುಕ್‌ನಲ್ಲಿ ವೀಡಿಯೋವನ್ನು ಲೈಕ್ ಮಾಡಿದ್ದು, `ತುಂಬಾ ಒಳ್ಳೆ ಕೆಲಸ ಮಾಡಿದ್ದೀಯಾ ನನ್ನ ಸಹೋದರ’ ಎಂದು ಕಾಮೆಂಟ್ ಮಾಡಿದ್ದಾನೆ. ಇದನ್ನು ವಿರೋಧಿಸಿ ಅದೇ ಗ್ರಾಮದ ನಿವಾಸಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವೀಡಿಯೋ ಕುರಿತು ಕಾಮೆಂಟ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಾಗ್ಪತ್ ಜಿಲ್ಲೆಯ ಛಪ್ರೌಲಿ ಗ್ರಾಮದ ನಿವಾಸಿಗಳು ಆರೋಪಿ ಬಗ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ನೋಯ್ಡಾ ವಲಯ ಎಡಿಸಿಪಿ ರಣವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ
ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ: ನಗರದ ವಾತಾವರಣ ಪರಿಶೀಲಿಸಲು ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ವಹಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಪ್ರಚೋದನಕಾರಿ ಸಂದೇಶಗಳು ಮತ್ತು ವೀಡಿಯೋಗಳಿಗೆ ಗಮನ ಕೊಡಬೇಡಿ ಎಂದೂ ಸಹ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.