ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಗೆ ಕರೆ ತಂದ ಮಹಿಳೆಯ ಮೇಲೆ ಡಾಕ್ಟರ್, ನರ್ಸ್ ಸೇರಿದಂತೆ ಸಿಬ್ಬಂದಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಹಿಳೆ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗುತ್ತಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ಸೆಕ್ಟರ್-31ರ ನಿಠಾರಿ ಗ್ರಾಮದ ನಿವಾಸಿಯಾಗಿರುವ ಮಹಿಳೆ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾರೆ. ಜುಲೈನಲ್ಲಿ ದಿಢೀರ್ ಅಂತಾ ಪತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂತು. ಚಿಕಿತ್ಸೆಗಾಗಿ ಪತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿಯ ಸ್ಟಾಫ್ ನರ್ಸ್ ಪರಿಚಯವಾದನು. ಹೀಗೆ ನಮ್ಮಿಬ್ಬರ ಮಧ್ಯೆ ಸ್ನೇಹ ಹುಟ್ಟಿಕೊಂಡಿತ್ತು.
Advertisement
Advertisement
ನನ್ನ ಸ್ನೇಹವನ್ನು ದುರುಪಯೋಗಪಡಿಸಿಕೊಂಡ ನರ್ಸ್ ಯುವಕ, ಓರ್ವ ವೈದ್ಯ ಹಾಗೂ ಕೆಲವು ಸಿಬ್ಬಂದಿ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ. ಇದುವರೆಗೂ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ.