ಯಾದಗಿರಿ/ಕೊಪ್ಪಳ: ರಂಜಾನ್ ಮಾಸಾಚರಣೆ ಹಿನ್ನೆಲೆಯಲ್ಲಿ ಆಜಾನ್ ಕೂಗಲಾಗುತ್ತಿದ್ದು, ಇದಕ್ಕಾಗಿ ಬಳಸುವ ಧ್ವನಿವರ್ಧಕಗಳಿಗೆ ಶಬ್ಧ ಮಿತಿಗೊಳಿಸುವಂತೆ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ ಪೊಲೀಸ್ ಇಲಾಖೆಯು ಮಸೀದಿ, ಚರ್ಚ್ ಹಾಗೂ ದೇವಾಲಯಗಳೂ ಸೇರಿದಂತೆ ಸುಮಾರು 713 ಧಾರ್ಮಿಕ ಕೇಂದ್ರಗಳಿಗೆ ಅಧಿಕೃತವಾಗಿ ನೋಟಿಸ್ ಜಾರಿಗೊಳಿಸಿದೆ.
ಯಾದಗಿರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಕೊಪ್ಪಳ ಜಿಲ್ಲೆಯ ಪೊಲೀಸ್ ಇಲಾಖೆಯು ಜಿಲ್ಲೆಯ ಎಲ್ಲ ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮಾಡುವವರಿಗೆ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಆಜಾನ್‌ನಿಂದ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳಿಗೆ ತೊಂದರೆ ಆಗ್ತಿದೆ: ಈಶ್ವರಪ್ಪ
Advertisement
Advertisement
ಕೊಪ್ಪಳ ಜಿಲ್ಲೆಯ ಸುಮಾರು 450ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರ, ಯಾದಗಿರಿ ಜಿಲ್ಲೆಯಲ್ಲಿರುವ 137 ದೇವಸ್ಥಾನ, 115 ಮಸೀದಿ, 11 ಚರ್ಚ್ ಸೇರಿದಂತೆ ಒಟ್ಟು 263 ಕೇಂದ್ರಗಳಿಗೆ 1986ರ ಅಡಿಯಲ್ಲಿ ನಿಗದಿ ಪಡಿಸಿದ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದ ಉಪಯೋಗ ಮಾಡದಂತೆ ಆದೇಶಿಸಿ ನೋಟಿಸ್ ನೀಡಲಾಗಿದೆ. ಜೊತೆಗೆ ಪರಿಸರ ಸಂರಕ್ಷಣೆ ಕಾಯ್ದೆಯಡೀ ನಿಯಮ ಪಾಲಿಸಬೇಕು, ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.
Advertisement