ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ನಟ ಪ್ರಕಾಶ್ ರೈ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ. ಇಂದು ನ್ಯಾಯಾಲಯಲ್ಲಿ ನಡೆದ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರು ಆಗುವಂತೆ ಸಮನ್ಸ್ ನೀಡಲಾಗಿತ್ತು. ಆದ್ರೆ ಸಂಸದ ಪ್ರತಾಪ್ ಸಿಂಹ ಒಮ್ಮೆಯೂ ಹಾಜರಾಗದ ಕಾರಣ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.
Advertisement
Advertisement
ಸಾಮಾಜಿಕ ಜಾಲತಾಣ ಟ್ವಿಟ್ಟರ್ ಮೂಲಕ ಪ್ರಕಾಶ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದಲ್ಲಿ ನಟ ಪ್ರಕಾಶ್ ರೈ ಅವರು ದೂರು ದಾಖಲಿಸಿದ್ದರು. ಸದ್ಯ ನ್ಯಾಯಾಲಯ ನೀಡಿರುವ ವಾರೆಂಟ್ ನಂತೆ ಸೋಮವಾರ ಖುದ್ದು ಬಂಧಿಸಿ ಕರೆತರುವಂತೆ ಸೂಚನೆ ನೀಡಲಾಗಿದೆ. ಮೈಸೂರು ಕಮೀಷನರ್ ಮೂಲಕ ವಾರೆಂಟ್ ತಲುಪಿಸಲು ಆದೇಶ ನೀಡಲಾಗಿದ್ದು, ಈ ಹಿಂದೆ ನ್ಯಾಯಾಲಯ ಮೂರು ಬಾರಿ ನೋಟಿಸ್ ನೀಡಿದ್ದರು ಕೂಡ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.
Advertisement
ಪ್ರತಾಪ್ ಸಿಂಹ ಟ್ವೀಟ್ ಏನಿತ್ತು?
ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ? ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು. ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ನಾಲ್ಕನೇ ಜೆಎಂಎಫ್ ನ್ಯಾಯಾಲಯದಲ್ಲಿ ಕೇವಲ 1 ರೂ.ಗೆ ಪರಿಹಾರ ಕೋರಿ ಪ್ರಕಾಶ ರಾಜ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv