Connect with us

Latest

ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

Published

on

ರೊಹ್ಟಕ್: ವಿವಾದತ್ಮಾಕ ಹೇಳಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‍ದೇವ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಮೇ 12ರಂದು ಕೋರ್ಟ್ ಬಾಬಾ ರಾಮ್‍ದೇವ್ ಅವರು ಜಾಮೀನು ಮಂಜೂರು ಮಾಡಿತ್ತು. ಆದರೆ ರಾಮ್‍ದೇವ್ ಇದೂವರೆಗೂ ನ್ಯಾಯಲಯ ಮುಂದೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ರೋಹ್ಟಕ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ನೀಡಿದೆ.

ಕಳೆದ ವರ್ಷದ ಏಪ್ರಿಲ್‍ನಲ್ಲಿ ರಾಮ್‍ದೇವ್ `ಭಾರತ್ ಮಾತಾ ಕೀ ಜೈ’ ಹೇಳದವರ ರುಂಡ ಕಡಿಯುತ್ತೇನೆಂದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಹರಿಯಾಣ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸುಭಾಷ್ ಬಾತ್ರಾ ಅವರು ರಾಮ್’ದೇವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಸಂಬಂಧ ರಾಮ್ ದೇವ್ ಗೆ ಬಂಧನ ವಾರಂಟ್ ಆದೇಶಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ರಾಮ್‍ದೇವ್ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

 

Click to comment

Leave a Reply

Your email address will not be published. Required fields are marked *