ನವದೆಹಲಿ: ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಮುಂಬೈ (Mumbai) ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ (Non Bailable Warrant) ಜಾರಿ ಮಾಡಿದೆ.
ಬ್ಯಾಂಕ್‌ಗೆ ಸಾಲ ಮರು ಪಾವತಿಸದ ಹಿನ್ನೆಲೆ ವಾರೆಂಟ್ ಜಾರಿ ಮಾಡಲಾಗಿದೆ. ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ಲೋನ್ ಪಡೆದಿದ್ದು, ಸಾಲ ಮರುಪಾವತಿ ಮಾಡಿಲ್ಲ. ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಪಡೆದಿದ್ದರು. ಇದನ್ನೂ ಓದಿ: ಮುಂದಿನ 3 ಗಂಟೆಗಳಲ್ಲಿ ಕರಾವಳಿ, ಮಧ್ಯ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
Advertisement
Advertisement
ಪ್ರಕರಣದಲ್ಲಿ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
Advertisement