ಮಂಗಳೂರು: ಕರಾವಳಿಯ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ವಿಚಾರ ಉಡುಪಿ ಬಳಿಕ ಇದೀಗ ಮಂಗಳೂರಿನಲ್ಲೂ ಕೇಳಿಬಂದಿದೆ. ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ.
Advertisement
ಮಂಗಳೂರಿನ ಪ್ರತಿಷ್ಠಿತ ದೇವಸ್ಥಾನಗಳಾದ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಸಂವಿಧಾನಕ್ಕೆ ವಿರುದ್ಧವಾದವರಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬರಹದ ಬ್ಯಾನರ್ ದೇವಸ್ಥಾನದ ಮುಂಭಾಗ ಹಾಕಲಾಗಿದೆ. ಇದನ್ನೂ ಓದಿ: Hijab Row: ಅನ್ಯ ಧರ್ಮೀಯರು ಜಾತ್ರೆಯಲ್ಲಿ ವ್ಯಾಪಾರ ಮಾಡಬಾರದು – ಕಾಪು ಮಾರಿಗುಡಿಗೆ ಪತ್ರ
Advertisement
Advertisement
ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್ ಜೊತೆ ಮಾತನಾಡಿದ್ದೇವೆ. ಬ್ಯಾನರ್ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡುತ್ತೇವೆ ಎಂದು ತಿಳಿಸಿದೆ. ಇತ್ತ ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಕಾನೂನು ತಜ್ಞರ ಬಳಿ ಮಾಹಿತಿ ಕೇಳಿದ್ದೇವೆ. ಬಪ್ಪನಾಡು ಆಡಳಿತ ಮಂಡಳಿ ನಿಯಮದ ಪ್ರಕಾರ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಅಂತಾ ಹೇಳಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
Advertisement