ಬೆಂಗಳೂರು: ರಾಷ್ಟ್ರ ರಕ್ಷಣೆಗಾಗಿ ಆಪರೇಷನ್ ಸಿಂಧೂರದ (Operation Sindoor) ಜೊತೆ ನಾವಿದ್ದೇವೆ; ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡುವ ಸಲುವಾಗಿ ಮೇ 15ರ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆಯನ್ನು (Tiranga Yatra) ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಲ್ಲೇಶ್ವರ ಮಂತ್ರಿಮಾಲ್‌ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಪ್ರಾರಂಭವಾಗಿ 18ನೇ ಕ್ರಾಸ್‌ವರೆಗೂ ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆ ಜರುಗಲಿದೆ. ಪಕ್ಷತೀತವಾಗಿ ನಡೆಯುವ ಈ ಯಾತ್ರೆಯಲ್ಲಿ ಪಕ್ಷದ ಯಾವುದೇ ಬ್ಯಾನರ್‌ಗಳು ಇರುವುದಿಲ್ಲ. ಈ ಯಾತ್ರೆಯಲ್ಲಿ ವೈದ್ಯರು, ಇಂಜಿನಿಯರ್‌ಗಳು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಎಲ್ಲರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ
ಮೇ 16 ಮತ್ತು 17ರಂದು ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು. ಪ್ರತಿಹಳ್ಳಿಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಪಕ್ಷದ ಬ್ಯಾನರ್ ಇಲ್ಲದೇ ಯಾತ್ರೆಯನ್ನು ಕೈಗೊಳ್ಳಲು ನಮ್ಮ ಕಾರ್ಯಕರ್ತರಿಗೆ ಸೂಚನೆಯನ್ನು ಕೊಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!
ಭಾರತದ ತಾಯಂದಿರ ಸಿಂಧೂರ ಅಳಿಸಿದರೆ ಏನು ಆಗುತ್ತದೆ ಎಂಬುದನ್ನು ನಮ್ಮ ಸೇನೆಯು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನದ ಉಗ್ರರ ಸ್ಥಳಗಳನ್ನು ಈಗಾಗಲೇ ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನವು ಕೊನೆಗೆ ಈ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಂಗಲಾಚುವ ಸ್ಥಿತಿಗೆ ನಮ್ಮ ಸೈನಿಕರು ತಂದಿದ್ದಾರೆ. ಭಾರತ ಎಂದೂ ಉಗ್ರವಾದವನ್ನು ಸಹಿಸಲ್ಲ ಎಂಬ ಸಂದೇಶವನ್ನು ಇಡೀ ಪ್ರಪಂಚಕ್ಕೆ ನೀಡಿರುತ್ತಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಹ್ಯಾಂಗರ್ಸ್ ನಾಶ, ರನ್‌ವೇಗಳಿಗೆ ಹಾನಿ – ಪಾಕ್ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ
ಸಿಂಧೂ ನದಿ ನೀರಿನ ವಿಚಾರವಾಗಿ ಈ ಹಿಂದೆ 90% ನೀರು ಪಾಕಿಸ್ತಾನಕ್ಕೆ 10% ಮಾತ್ರ ಭಾರತಕ್ಕೆ ಎಂಬ ಒಪ್ಪಂದವನ್ನು ಪ್ರಧಾನ ಮೋದಿ ಜೀಯವರು ರದ್ದುಪಡಿಸಿರುವುದು ಒಂದು ಸಾಧನೆಯಾಗಿದೆ. ನ್ಯೂಕ್ಲಿಯರ್ ಬಾಂಬ್ ಬೆದರಿಕೆಗೆ ನಾವು ಹೆದರುವುದಿಲ್ಲ ಎಂಬ ಸಂದೇಶವನ್ನು ನಮ್ಮ ಪ್ರಧಾನಿಯವರು ಪಾಕಿಸ್ತಾನಕ್ಕೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 15 ಮಂದಿಗೆ ಗಾಯ
ನಮ್ಮ ಸೈನಿಕರು ದಾಳಿ ಮಾಡಿರುವುದಕ್ಕೆ ಸಾಕ್ಷಿ ಇದೆಯೇ ಎಂದು ಪ್ರಶ್ನಿಸುತ್ತಿದ್ದರು. ಅಲ್ಲಿನ ಸೈನಿಕರು ಮತ್ತು ಭಯೋತ್ಪಾದಕರು ಎಷ್ಟು ಜನ ಹತರಾಗಿದ್ದಾರೆ ಎಂದು ಪಾಕಿಸ್ತಾನವು ಈಗಾಗಲೇ ಒಪ್ಪಿಕೊಂಡಿದೆ. ನಮ್ಮ ಸೇನಾ ಅಧಿಕಾರಿಗಳೇ ಪತ್ರಿಕಾಗೋಷ್ಠಿ ನೀಡಿ, ಪಾಕಿಸ್ತಾನದ ಮೇಲೆ ದಾಳಿ ಮಾಡಿರುವುದಕ್ಕೆ ಸಾಕ್ಷಿ ಸಮೇತ ಉತ್ತರ ನೀಡಿದ್ದಾರೆ. ಆದರೂ ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ನಂಬಲು ಆಗುತಿಲ್ಲ ಮತ್ತು ಭಾರತದ ಕಾರ್ಯಾಚರಣೆಯನ್ನು ಸಹಿಸಲು ಆಗುತ್ತಿಲ್ಲ ಎಂದರು. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ಗೆ ಪಾಕ್ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು
ಇಂದು ನಮ್ಮ ಸೈನಿಕರು ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ನಮ್ಮದು ಎಂದು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ನಮ್ಮ ಪ್ರಧಾನ ಮೋದಿ ಜೀರವರು ಸಹ ಹೇಳಿದ್ದಾರೆ. ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ನಾವು ವಾಪಸ್ ಪಡೆಯುತ್ತೇವೆ ಹಾಗೂ ಸಿಂಧೂ ನದಿಯ ಯಾವುದೇ ಒಪ್ಪಂದವನ್ನು ಮಾಡುವುದಿಲ್ಲ. ಪಾಕಿಸ್ತಾನದ ಭಯೋತ್ಪಾದಕರಿಗೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿರುವ ನಮ್ಮ ಸೈನಿಕರಿಗೆ ಗೌರವ ನೀಡುವ ಸಲುವಾಗಿ ಈ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ಲೋಕಾ ರೇಡ್ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ