ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಯಶವಂತಪುರ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಕಾರ್ಪೋರೇಷನ್, ಮಾರ್ಕೆಟ್, ಲಾಲ್ಬಾಗ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ ಎಚ್ಚರಿಕೆ
ವೈಟ್ಫೀಲ್ಡ್, ಮಾರತ್ತಹಳ್ಳಿ, ಔಟರ್ರಿಂಗ್ ರಸ್ತೆ, ಬಳಗೆರೆ, ಬೆಳ್ಳಂದೂರು ಸುತ್ತಮುತ್ತ ಮಳೆಯಾಗಿದ್ದು, ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು. ಸುರಿಯುವ ಮಳೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಇತ್ತ ನೆಲಮಂಗಲದ ಹಲವೆಡೆ ರಾತ್ರಿಯಿಡಿ ಮಳೆಯಾಗಿದ್ದು, ವಾತಾವರಣ ಕೂಲ್ ಕೂಲ್ ಆಗಿದೆ. ಇದರ ನಡುವೆ ಬೆಳಂಬೆಳಗ್ಗೆ ಮಳೆಯಿಂದಾಗಿ ಅವಘಡ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಇಚರ್ ಲಾರಿ, 108 ಆಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದೆ. ಚಿಕ್ಕಬಾಣಾವಾರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಚಾಮರಾಜನಗರ | ಬೈಕ್ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

