ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಇನ್ನು ಮುಂದೆ ಚಿಕಿತ್ಸೆಗಾಗಿ ಗಂಟೆಗಟ್ಟಲೆ ಕಾಯುವ ವ್ಯವಸ್ಥೆ ಇರುವುದಿಲ್ಲ. ಇದಕ್ಕಾಗಿ ವಿಶೇಷ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ (Sudhakar) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಹರೀಶ್ ಕುಮಾರ್, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಗಂಟೆಗಟ್ಟಲೇ ಕಾಯುವ ಸ್ಥಿತಿ ಬಂದಿದೆ. ಸರಿಯಾದ ಮಾಹಿತಿ ಇಲ್ಲ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ ವ್ಯವಸ್ಥೆ ಸರಿ ಮಾಡಬೇಕು ಎಂದರು.
ಇದಕ್ಕೆ ಉತ್ತರ ನೀಡಿದ ಸಚಿವ ಸುಧಾಕರ್, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ತುಂಬಾ ಸಮಯ ಕಾಯೋ ಅವಶ್ಯಕತೆ ಇಲ್ಲ. ಈಗ ಹೊಸ ಹೊಸ ವ್ಯವಸ್ಥೆ ಜಾರಿ ಮಾಡಲಾಗಿದೆ. QR ಕೋಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ಸ್ಕಿಪ್ ದ ಕ್ಯೂ ಅಂತ ಕಾರ್ಯಕ್ರಮ ಮಾಡಿದ್ದೇವೆ. ಈ ಆಪ್ ನಲ್ಲಿ ಆಸ್ಪತ್ರೆಯಲ್ಲಿ ಎಷ್ಟು ಜನ ಇದ್ದಾರೆ, ಕ್ಯೂ ಎಷ್ಟು ಅಂತ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಉತ್ತರ ನೀಡಿದರು. ಇದನ್ನೂ ಓದಿ: ರೂಪಾ ಮೌದ್ಗಿಲ್ ವಿರುದ್ಧ ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿ
ಇದಲ್ಲದೆ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 19 ಜಿಲ್ಲೆಗಳಲ್ಲಿ ಹೆಲ್ಪ್ ಡೆಸ್ಕ್ ಪ್ರಾರಂಭ ಮಾಡಲಾಗಿದೆ. ದಿನದ 24 ಗಂಟೆ 4 ಜನ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮಾಹಿತಿ ಕೊಡುತ್ತಾರೆ ಎಂದು ಮಾಹಿತಿ ನೀಡಿದರು.
ಆಯುಷ್ಮಾನ್ ಭಾರತ್ ಮತ್ತು ರಾಜ್ಯದ ಹೆಲ್ತ್ ಕಾರ್ಡ್ ಒಟ್ಟಾಗಿ ಕಾರ್ಡ್ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 4 ದಿನಗಳಲ್ಲಿ ಈಗಾಗಲೇ 1 ಕೋಟಿ 28 ಲಕ್ಷ ಕಾರ್ಡ್ ಕೊಡಲಾಗಿದೆ.ಒಟ್ಟು 4 ಕೋಟಿ ಕಾರ್ಡ್ ಕೊಡಬೇಕು. ಎಲ್ಲೇ ಹೋದರೂ ಈ ಕಾರ್ಡ್ ತೋರಿಸಿದರೆ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?