Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

Latest

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ – ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

Public TV
Last updated: September 2, 2025 1:25 pm
Public TV
Share
2 Min Read
Uttarakhand
SHARE

– ಮೇಘಸ್ಫೋಟ, ಭೂಕುಸಿತ, ಪ್ರವಾಹಕ್ಕೆ ನೂರಕ್ಕೂ ಅಧಿಕ ಜನರು ಬಲಿ

ನವದೆಹಲಿ: ಉತ್ತರ ಭಾರತದಾದ್ಯಂತ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ತತ್ತರಿಸಿ ಹೋಗಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಗ್ರಹಿಸಿದ್ದಾರೆ.

ಇತ್ತೀಚಿಗೆ ಉತ್ತರಾಖಂಡದಲ್ಲಿ (Uttarakhand) ಸಂಭವಿಸಿದ ಮೇಘಸ್ಫೋಟದಿಂದಾಗಿ (Cloudburst) ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಂಟಾದ ಸರಣಿ ಮೇಘಸ್ಫೋಟ, ಭೂಕುಸಿತ ಮತ್ತು ಹಠಾತ್ ಪ್ರವಾಹದಿಂದಾಗಿ 69 ಜನರು ಕಾಣೆಯಾಗಿದ್ದಾರೆ. ಹಲವು ಮನೆಗಳು ನಾಶವಾಗಿ ಪ್ರಾಣಿಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಸದ್ಯ ಹವಾಮಾನ ಇಲಾಖೆ (IMD) ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

ಕಳೆದ ಹದಿನೈದು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದಾಗಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಜಮ್ಮು-ಶ್ರೀನಗರ ಹೆದ್ದಾರಿ ಕಳೆದ ಎಂಟು ದಿನಗಳಿಂದ ಬಂದ್ ಆಗಿದೆ. ಸೋಮವಾರ (ಸೆ.1) ಸುರಿದ ನಿರಂತರ ಮಳೆಯ ನಂತರ ರಾಜೌರಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಧಿಕಾರಿಗಳು 19 ಕುಟುಂಬಗಳನ್ನು ಸ್ಥಳಾಂತರಿಸಿದ್ದಾರೆ. ಇನ್ನೂ ದೋಡಾದಲ್ಲಿ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ 500 ಮನೆಗಳಿಗೆ ಹಾನಿಯಾಗಿದೆ.

ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ಸೇರಿದಂತೆ ವಾಯುವ್ಯ ಭಾರತದಲ್ಲಿ ಸೆ.7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ (ಸೆ.2) ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರಾಖಂಡ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ; ಪ್ರವಾಹ ಸ್ಥಿತಿಯಲ್ಲಿ ಯಮುನಾ ನದಿ – ಪಂಜಾಬ್‌ನಲ್ಲಿ ನಾಳೆವರೆಗೆ ಶಾಲಾ-ಕಾಲೇಜುಗಳಿಗೆ ರಜೆ

ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಖರ್ಗೆ ಆಗ್ರಹ:
ಉತ್ತರ ಭಾರತದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾದ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ ಮತ್ತು ಹರಿಯಾಣ ರಾಜ್ಯಗಳಿಗೆ ಬೇಡಿಕೆಗೆ ಅನುಗುಣವಾಗಿ ಮೀಸಲಾದ ಪ್ಯಾಕೇಜ್‌ನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.

ನೈಸರ್ಗಿಕ ವಿಕೋಪದ ಹಿನ್ನೆಲೆ ಯಾವುದೇ ರಾಜಕೀಯ ಮಾಡಬಾರದು, ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ಪರಿಹಾರವನ್ನು ನೀಡಲು ಪಿಎಂ ಕೇರ್ಸ್‌ ನಿಧಿಯನ್ನು ಬಳಸಿಕೊಳ್ಳಬೇಕು, ಅಗತ್ಯ ನೆರವು ನೀಡುವಂತೆ ಖರ್ಗೆ ಕರೆ ನೀಡಿದ್ದಾರೆ.ಇದನ್ನೂ ಓದಿ: ಆನೆಯ ಮೇಲೆ ಅಂಬಾರಿ ಕಂಡೆ.. ಅಂಬಾರಿಯೊಳಗೆ ಗಣೇಶನ ಕಂಡೆ..!

TAGGED:heavy rainIMDmallikarjun khargeNorth IndiaRain Alertಉತ್ತರ ಭಾರತನವದೆಹಲಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Gilli Nata
ಗಿಲ್ಲಿ ಬೇಜವಾಬ್ದಾರಿ ಪರ್ಸನ್‌, ಪಕ್ಷಪಾತಿ – ಕ್ಯಾಪ್ಟನ್ಸಿ ಬಗ್ಗೆ ಕಿಚ್ಚನ ಮುಂದೆ ಮನೆ ಮಂದಿ ದೂರು!
Cinema Latest TV Shows
Sharan Yograj Bhat 2
ಯೋಗರಾಜ್ ಭಟ್ಟರ `ಅಮಲಿ’ಗೆ ದನಿಯಾದ ನಟ ಶರಣ್
Cinema Latest Sandalwood
Koragajja Movie 2
ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ – ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ದೈವ ನರ್ತಕರ ಆಕ್ರೋಶ
Cinema Districts Karnataka Kodagu Latest Sandalwood Top Stories
Toxic Tara Sutaria as REBECCA
ಟಾಕ್ಸಿಕ್ ಚಿತ್ರದ ರೆಬೆಕಾ ಪಾತ್ರದಲ್ಲಿ ತಾರಾ ಸುತಾರಿಯಾ
Cinema Latest Sandalwood Top Stories

You Might Also Like

evm counting
Bengaluru City

ಸರ್ಕಾರದ ವೆಬ್‌ಸೈಟ್‌ನಿಂದ EVM ವಿಶ್ವಾರ್ಹತೆ ಸಮೀಕ್ಷೆ ಡಿಲೀಟ್; ಬಿಜೆಪಿ ಟೀಕೆ

Public TV
By Public TV
2 hours ago
Nicolas Maduro 1
Latest

ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌

Public TV
By Public TV
2 hours ago
Uttara Kannada
Districts

ಅಕ್ರಮ ಸಂಬಂಧ – ಮದ್ವೆಗೆ ಒಪ್ಪದಿದ್ದಕ್ಕೆ ರಂಜಿತಾಳ ಕುತ್ತಿಗೆ ಇರಿದು ಹತ್ಯೆ; ರಫೀಕ್ ಎಸ್ಕೇಪ್‌

Public TV
By Public TV
2 hours ago
Chitradurga Kyathappana Parishe Tribal Tradition
Chitradurga

ಬುಡಕಟ್ಟು ಸಂಪ್ರದಾಯದ ಕಾಡುಗೊಲ್ಲರ ಕ್ಯಾತಪ್ಪನ ಪರಿಷೆ – ಮುಳ್ಳಿನ ಗುಡಿಯಲ್ಲಿ ಆಚರಿಸುವ ವಿಶೇಷ ಜಾತ್ರೆ

Public TV
By Public TV
2 hours ago
Mausam Noor
Latest

ಬಂಗಾಳ ಚುನಾವಣೆಗೂ ಮುನ್ನವೇ ʻಕೈʼ ಹಿಡಿದ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ನೂರ್

Public TV
By Public TV
3 hours ago
Zameer Ahmed Khan
Bellary

Ballari Clash | ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ನಗದು ಪರಿಹಾರ – ಮನೆ ಭರವಸೆ ಕೊಟ್ಟ ಜಮೀರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?