ನವದೆಹಲಿ: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ (Karnataka) ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮೇ ತಿಂಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲೂ ಸಾಮಾನ್ಯ ಮಳೆಯಾಗಲಿದೆ. ಉಳಿದಂತೆ ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: 10 ಲಕ್ಷದಲ್ಲಿ ಎಂಟು ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ: ಕೋವಿಶೀಲ್ಡ್ ಬಗ್ಗೆ ಸ್ಪಷ್ಟನೆ ನೀಡಿದ ICMR ನಿವೃತ್ತ ವಿಜ್ಞಾನಿ
ದಕ್ಷಿಣ ಭಾರತ ಮತ್ತು ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಉಷ್ಣ ಮಾರುತ ಹೆಚ್ಚಲಿದೆ. ಉತ್ತರ ಭಾರತದಲ್ಲಿ 5-8 ದಿನಗಳ ಕಾಲ ಹಾಗೂ ಕರ್ನಾಟಕದಲ್ಲಿ 3-4 ದಿನ ಸಾಮಾನ್ಯ ಬಿಸಿಲಿಗಿಂತ ಹೆಚ್ಚು ಬಿಸಿಲು ದಾಖಲಾಗಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಬಿಸಿಲು ವರದಿಯಾಗಿದೆ. ಮುಂಗಾರಿನ ಕೊರತೆಯಿಂದಾಗಿ ತಾಪಮಾನ ಹೆಚ್ಚಾಗಿದೆ. ಅನೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಇದನ್ನೂ ಓದಿ: ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ನನಗೂ ಐದು ಜನ ಮಕ್ಕಳು: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ