ಬೆಂಗಳೂರು: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಕೇಳಿಬಂದಿದೆ.
ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ತನ್ನ ಚೊಚ್ಚಲ ಬಜೆಟ್ ಮಂಡಿಸಿದ್ದೇ ತಡ ಅದರಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂಬ ಕೂಗು ಕೇಳಿ ಬಂದಿತ್ತು. ಈಗ ಆ ಬೆನ್ನಲ್ಲೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಕೂಗು ಕೇಳಿ ಬರುತ್ತಿದೆ.
Advertisement
ಈಗಾಗಲೇ ಪ್ರತ್ಯೇಕ ರಾಜ್ಯ ಕೂಗು ಭುಗಿಲೆದ್ದಿದ್ದು ಅಗಸ್ಟ್ 2 ರಂದು 13 ಜಿಲ್ಲೆಗಳನ್ನು ಒಳಗೊಂಡಂತೆ ಬಂದ್ ಆಚರಿಸಲಾಗುವುದು ಎಂದು ಉತ್ತರ ಕರ್ನಾಟಕ ರೈತ ಸಂಘ ಘೋಷಿಸಿದೆ. ಪ್ರತ್ಯೇಕ ರಾಜ್ಯವಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಆಗಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಪ್ರಾರಂಭ ಮಾಡಲಾಗುವುದು ಅಂತ ಸಂಘ ತಿಳಿಸಿದೆ.
Advertisement
Advertisement
ಸಮ್ಮಿಶ್ರ ಸರ್ಕಾರ ಮಂಡಿಸಿದ್ದ ಹೊಸ ಬಜೆಟ್, ಸಮಗ್ರ ಕರ್ನಾಟಕ ಅಭಿವೃದ್ಧಿಯ ದೃಷ್ಟಿಕೋನ ಹೊಂದಿಲ್ಲ ಎಂದು ಸಾಕಷ್ಟು ವಿರೋಧ ಕೇಳಿಬಂದಿತ್ತು. ಆದರೆ ಈಗ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ಬೇಕು ಎಂದು ಉತ್ತರ ಕರ್ನಾಟಕ ರೈತರ ಸಂಘ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.