ನವದೆಹಲಿ: ಮಣಿಪುರದಲ್ಲಿ (Manipur) ನಡೆಯುತ್ತಿರುವ ಉದ್ವಿಗ್ನತೆ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ (BJP) ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬುಧವಾರ ವಾಗ್ದಾಳಿ ನಡೆಸಿದ್ದು, ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ್ದಾರೆ.
147 ದಿನಗಳಿಂದ ಮಣಿಪುರದ ಜನರು ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಗೆ ರಾಜ್ಯಕ್ಕೆ ಭೇಟಿ ನೀಡಲು ಸಮಯವಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳ ಗುರಿಯಾಗುತ್ತಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ಕಲಹದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಅಸ್ತ್ರಗೊಳಿಸಲಾಗಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ‘X’ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿಗೆ ‘ಸಿಟಿಜನ್ ಆಫ್ ಮುಂಬೈ’ ಪ್ರಶಸ್ತಿ
ಇದೇ ವೇಳೆ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ಅವರು, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh) ಅವರನ್ನು ಅಸಮರ್ಥ ಎಂದು ಕರೆದು ಅವರನ್ನು ವಜಾಗೊಳಿಸುವಂತೆ ಪ್ರಧಾನಿ ಮೋದಿಯನ್ನು ಒತ್ತಾಯಿಸಿದರು. ಪ್ರಕ್ಷುಬ್ಧತೆಯನ್ನು ನಿಯಂತ್ರಿಸಲು ಇದು ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತೇಯ್ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯಿಂದಾಗಿ ಮಣಿಪುರದಲ್ಲಿ ಹೊಸ ಉದ್ವಿಗ್ನತೆ ಉಂಟಾಗಿದೆ. ಮಂಗಳವಾರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಿದ ನಂತರ ಇಬ್ಬರು ವಿದ್ಯಾರ್ಥಿಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ
Web Stories