ಚೆನ್ನೈ: ಹಿಂದೂ ದೇವಾಲಯಗಳಿಗೆ (Hindu Temple) ಹಿಂದೂಯೇತರು ಪ್ರವೇಶಿಸಿ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಮದ್ರಾಸ್ ಹೈಕೋರ್ಟ್ (Madras High Court) ಕಿಡಿಕಾರಿದೆ. ಇದು ಪಿಕ್ನಿಕ್ ಸ್ಪಾಟ್ ಅಲ್ಲ ಎಂದು ಎಚ್ಚರಿಸಿದೆ.
ದೇಗುಲಗಳಲ್ಲಿರುವ ‘ಕೋಡಿಮರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ. ಹಿಂದೂಗಳು ಕೂಡ ವೃತ್ತಿ ಮತ್ತು ಧಾರ್ಮಿಕ ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ
Advertisement
Advertisement
ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಅವರು ಸೂಚಿಸಿದ್ದಾರೆ.
Advertisement
ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಪ್ರಸಿದ್ಧ ಮುರುಗನ್ ದೇವಾಲಯವಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ನಿರ್ವಹಿಸುತ್ತದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ದಾಳಿ
Advertisement
ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೋಡಿಮಾರಂ ನಂತರ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.
ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡಬಾರದು. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಗಳಿಗೆ ಭೇಟಿ ನೀಡುವುದಾದರೆ, ಒಂದಷ್ಟು ಒಪ್ಪಂದಗಳನ್ನು ಮಾಡಿಕೊಳ್ಳಬೇಕು. ದೇವರಲ್ಲಿ ನಂಬಿಕೆ ಮತ್ತು ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅನುಸರಿಸುತ್ತಾರೆಯೇ? ದೇವಾಲಯದ ಪದ್ಧತಿಗಳಿಗೆ ಬದ್ಧರಾಗುತ್ತಾರೆಯೇ? ಅಂತಹ ಕಾರ್ಯದಲ್ಲಿ ಹಿಂದೂಯೇತರರು ದೇವಾಲಯಕ್ಕೆ ಭೇಟಿ ನೀಡುವುದಾದರೆ ಅನುಮತಿ ಕೊಡಬಹುದು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ
ಅರುಳ್ಮಿಘು ಬ್ರಹದೀಶ್ವರ ದೇವಸ್ಥಾನವನ್ನು ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ. ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದೆ ಎಂದು ವರದಿಯಾಗಿದೆ. ಅಲ್ಲದೇ ಇತರ ಧರ್ಮದ ವ್ಯಕ್ತಿಗಳು ಮಧುರೈನ ಅರುಲ್ಮಿಘು ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಗರ್ಭಗುಡಿ ಮತ್ತು ಗರ್ಭಗುಡಿಯ ಬಳಿ “ತಮ್ಮ ಪವಿತ್ರ ಪುಸ್ತಕ” ದೊಂದಿಗೆ ಪ್ರವೇಶಿಸಿದ್ದರು. ಅಲ್ಲಿ ತಮ್ಮ ಪ್ರಾರ್ಥನೆಗಳನ್ನು ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಕೂಡ ವರದಿಯಾಗಿದೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.