ಇದು ಯುದ್ಧದ ಸಮಯವಲ್ಲ – ಪುಟಿನ್‌ಗೆ ಪ್ರಧಾನಿ ಮೋದಿ ಸಲಹೆ

Public TV
2 Min Read
Narendra Modi And Putin

ಸಮರ್‌ಕಂಡ್: ಉಜ್ಬೇಕಿಸ್ತಾನ ಶಾಂಘೈ ಸಹಕಾರ ಸಂಘಟನೆ (SCO) ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಉಲ್ಲೇಖಿಸಿ, ಪುಟಿನ್ (Vladimir Putin) ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಮಾಸ್ಕೋದ ಪಡೆಗಳು ಉಕ್ರೇನ್ (Russia Vs Ukraine War) ಅನ್ನು ಆಕ್ರಮಿಸಿದ ನಂತರ ಉಭಯ ನಾಯಕರು ಮೊದಲಬಾರಿಗೆ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಪ್ರಧಾನಿ ಅವರು `ಇದು ಯುದ್ಧದ ಸಮಯವಲ್ಲ’ ಎಂದು ಪುಟಿನ್‌ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: Breaking: ಓಟಿಟಿ ಟಾಪರ್ ಆಗಿ ಬಿಗ್ ಬಾಸ್ ಸೀಸನ್ 9ಕ್ಕೆ ಎಂಟ್ರಿ ಪಡೆದ ರೂಪೇಶ್ ಶೆಟ್ಟಿ

Narendra Modi And Putin MEET

ಬಳಿಕ ಪ್ರತಿಕ್ರಿಯಿಸಿದ ರಷ್ಯಾ ಅಧ್ಯಕ್ಷ (Russia President) ವ್ಲಾಡಿಮಿರ್ ಪುಟಿನ್, ಕಳೆದ ಫೆಬ್ರುವರಿಯಲ್ಲಿ ಪ್ರಾರಂಭವಾದ ಉಕ್ರೇನ್ (Ukraine) ವಿರುದ್ಧದ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ. ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ. ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ನಿಮ್ಮ ನಿಲುವು, ನಿಮ್ಮ ಕಾಳಜಿಗಳು ನನಗೆ ಅರ್ಥವಾಗುತ್ತಿದೆ. ಇದನ್ನು ಆದಷ್ಟು ಬೇಗ ಕೊನೆಗೊಳಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

Narendra Modi And Putin 2

ಎದುರಾಳಿ ತಂಡ, ಉಕ್ರೇನ್ ನಾಯಕತ್ವ, ಸಂಧಾನ ಪ್ರಕ್ರಿಯೆಯನ್ನು ತಿರಸ್ಕರಿಸುವುದಾಗಿ ಘೋಷಿಸಿತು ಮತ್ತು ಯುದ್ಧಭೂಮಿಯಲ್ಲಿ ಮಿಲಿಟರಿ ವಿಧಾನಗಳ ಮೂಲಕ ತನ್ನ ಗುರಿಗಳನ್ನು ಸಾಧಿಸಲು ಬಯಸುವುದಾಗಿ ಹೇಳಿದೆ ಎಂದು ಪುಟಿನ್ ತಿಳಿಸಿದ್ದಾರೆ.

ಬಳಿಕವೇ ಮಾತನಾಡಿದ ಪ್ರಧಾನಿ ಮೋದಿ `ಇದು ಯುದ್ಧದ ಸಮಯವಲ್ಲ’ ಎಂದು ಮನವರಿಕೆ ಮಾಡಿಕೊಟ್ಟದ್ದಾರೆ. ಇದನ್ನೂ ಓದಿ: ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನಾ ನಿಯೋಗಕ್ಕಿಲ್ಲ ಅನುಮತಿ

SCO ಅಧ್ಯಕ್ಷ ಸ್ಥಾನ ಭಾರತಕ್ಕೆ ಹಸ್ತಾಂತರ: ಉಜ್ಬೇಕಿಸ್ತಾನ ಎಸ್‌ಸಿಒ ಅಧ್ಯಕ್ಷ ಸ್ಥಾನವನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಯಿತು. ಉಜ್ಬೇಕಿಸ್ತಾನ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರು ಸಮರ್ಕಂಡ್‌ನಲ್ಲಿ 22ನೇ ಎಸ್‌ಸಿಒ ಶೃಂಗಸಭೆ ಅಧ್ಯಕ್ಷತೆ ವಹಿಸಿದ್ದರು. 2023ರಲ್ಲಿ ಭಾರತ ಎಸ್‌ಸಿಒ ಶೃಂಗಸಭೆ ಆಯೋಜಿಸುತ್ತದೆ. ಈ ಜವಾಬ್ದಾರಿಯುತ ಕಾರ್ಯಕ್ರಮ ಅನುಷ್ಠಾನದಲ್ಲಿ ಭಾರತಕ್ಕೆ ಸಹಾಯ ಮಾಡಲು ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದು ಉಜ್ಬೇಕಿಸ್ತಾನ ವಿದೇಶಾಂಗ ಸಚಿವ ವ್ಲಾಡಿಮಿರ್ ನೊರೊವ್ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *